ಕಾರವಾರ:
2017-18ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಧನಶ್ರೀ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಹೆಚ್.ಐ.ವಿ ಸೋಂಕಿತ ಸಂತ್ರಸ್ಥೆ ಮಹಿಳೆಯರಿಗೆ ಸ್ವಯಂ-ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ
ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಾರವಾರ ಇವರನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ಸೂಕ್ತ ಅಡಕಗಳೊಂದಿಗೆ ಆಯಾ ತಾಲೂಕಿನ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.
Leave a Comment