ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಅ. 10ರಂದು ಬೆಳಗ್ಗೆ 10.30ಕ್ಕೆ ಕುಮಟಾ ಹಿರೆಗುತ್ತಿಯ ಸೆಕೆಂಡರಿ ಹೈಸ್ಕೂಲ್ನಲ್ಲಿ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ರಾಜ್ಯ ಅರಣ್ಯ ವಿಭಾಗ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಜೈವಿಕ ಇಂಧನ ಸಂಶೋಧನೆ ಮತ್ತು ಮಾಹಿತಿ ಪ್ರಾತ್ಯಕ್ಷಿಕಾ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಡಾ. ವಿ.ಎನ್.ನಾಯಕ ತಿಳಿಸಿದ್ದಾರೆ.
Leave a Comment