• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

August 10, 2017 by Gaju Gokarna Leave a Comment

ಹೊನ್ನಾವರ : ಸರಕಾರಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹೊನ್ನಾವರ ತಾಲೂಕಾ ಆಸ್ಪತ್ರೆ ಉತ್ತಮ ವೈದ್ಯರ ತಂಡದೊಂದಿಗೆ ಸುಸಜ್ಜಿತ ಆಸ್ಪತ್ರೆಯಾಗಿದೆ. ಆದರೆ ಕೆಲವೊಂದು ಗಂಭೀರ ನ್ಯೂನ್ಯತೆಗಳು ಎದ್ದು ಕಾಣುತ್ತಿದೆ. ಈ ಬಗ್ಗೆ ಕಳೆದ 2-3 ವರ್ಷಗಳಿಂದ ಮನವಿ ನೀಡಿದರೂ ಯಾವುದೇ ಸ್ಪಂಧನೆ ದೊರೆತಿಲ್ಲ.
ತಾಲೂಕಿನ ಜನಸಂಖ್ಯೆ ಹೆಚ್ಚಾದಂತೆ ರೋಗಿಗಳ ಸಂಖ್ಯೆಯು ಹೆಚ್ಚಳವಾಗಿದೆ. ಸರಕಾರಿ ಆಸ್ಪತ್ರೆಗೆ ದಾಖಲಾದ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರ ಕೊರತೆ ಇದೆ.
ಆಸ್ಪತ್ರೆಯಲ್ಲಿ ವೈಜ್ಞಾನಿಕ ತಪಾಸಣಾ ಸ್ಕ್ಯಾನಿಂಗ್, ಇನ್ನಿತರೆ ಯಂತ್ರೋಪಕರಣ ಇಲ್ಲದೇ ಇಲ್ಲಿ ದಾಖಲಾದ ರೋಗಿಗಳು ಅನಿವಾರ್ಯವಾಗಿ ಸಾಲ ಮಾಡಿ ಖಾಸಗಿ ಆಸ್ಪತ್ರೆಗೆ ತೆರಳಿ ಸ್ವಂತ ಹಣ ಖರ್ಚು ಮಾಡಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತಾಗಿದೆ. ಇದರಿಂದ ರೋಗಿಗಳಿಗೆ ಹಾಗೂ ರೋಗಿಯ ಕುಟುಂಬಗಳಿಗೆ ಆರ್ಥಿಕ ಹೊರೆ ಹೆಚ್ಚಿದೆ.
ಬಡಜನರ ಆರೋಗ್ಯ ದೃಷ್ಠಿಯಿಂದ 15 ದಿನದೊಳಗಾಗಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸಬೇಕು. ಇಲ್ಲವಾದಲ್ಲಿ ಜಿಲ್ಲಾ ವೈದ್ಯಾಧಿಕಾರಿಗಳ ಕಛೇರಿ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಇತರ ಬೇಡಿಕೆಗಳು : ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರಮಾಣ ಪತ್ರ ಪಡೆಯಬೇಕಾದಲ್ಲಿ ವೈದ್ಯಕೀಯ ಪ್ರಮಾಣ ಪತ್ರವನ್ನು ಉಚಿತವಾಗಿ ಪೂರೈಸಬೇಕು. ಅಪಘಾತ ಸಂಭವಿಸಿದಾಗ ತುರ್ತು ಚಿಕಿತ್ಸೆ ನೀಡಲು ಸಕಾಲದಲ್ಲಿ ಯಾವುದೇ ವೈದ್ಯರು ಹಾಜರಿರುವುದಿಲ್ಲ. 24 ಗಂಟೆಯೂ ಖಾಯಂ ವೈದ್ಯರನ್ನು ನೇಮಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಆಟೋ ಚಾಲಕ-ಮಾಲಕ ಸಂಘದ ಅಧ್ಯಕ್ಷ ಶಿವರಾಜ ಮೇಸ್ತ, ಕ್ರಾಂತಿರಂಗದ ಉಪಾಧ್ಯಕ್ಷ ಜಿ.ಎನ್.ಗೌಡ, ಅನಿತಾ ಪಾಲೇಕರ್, ಡಾ.ಎಸ್.ಡಿ.ಹೆಗಡೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ್ ಕಿಣಿ ಮನವಿ ಸ್ವೀಕರಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಅಪಘಾತ, ಆಗ್ರಹಿಸಿ, ಆಸ್ಪತ್ರೆ, ಇನ್ನಿತರೆ, ಉಗ್ರ, ಉತ್ತಮ, ಚಿಕಿತ್ಸೆ, ಜಿಲ್ಲಾಧಿಕಾರಿಗಳಿಗೆ, ತಜ್ಞರನ್ನು, ತುರ್ತು, ನೇಮಿಸುವಂತೆ, ಪಟ್ಟಣದ, ಪ್ರತಿಭಟನೆ, ಮನವಿ, ಯಂತ್ರೋಪಕರಣ, ರಿಕ್ಷಾಚಾಲಕರ, ವೈದ್ಯರ, ಶಸ್ತ್ರಚಿಕಿತ್ಸಾ, ಸಂಘ, ಸಂಭವಿಸಿದಾಗ, ಸುಸಜ್ಜಿತ, ಸ್ಕ್ಯಾನಿಂಗ್

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar