• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶ್ರೀನಿವಾಸ ನಾಯಕರ ಪ್ರಾಯೋಜಕತ್ವದಲ್ಲಿ ದಿ| ಅಭಿಜಿತ ನಾಯಕ ಸ್ಮರಣಾರ್ಥ ಅರ್ಥಪೂರ್ಣವಾಗಿ ಜರುಗಿದ ಸ್ಕೂಲಬ್ಯಾಗ್ ವಿತರಣಾ ಸಮಾರಂಭ

August 10, 2017 by Gaju Gokarna Leave a Comment

ದಿ| ಅಭಿಜಿತ್ ಶ್ರೀನಿವಾಸ ನಾಯಕ ಅವರ ಸ್ಮರಣಾರ್ಥ ಗಂಗಾವಳಿಯ ಗಂಗಾ ಮಾತಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ ಶ್ರೀನಿವಾಸ ನಾಯಕ ನಾಡುಮಾಸ್ಕೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ದಿ| ಅಭಿಜಿತ್ ಸ್ಮರಣಾರ್ಥ ಕಳೆದ ಎಂಟು ವರ್ಷಗಳಿಂದ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸುತ್ತಾ ತನ್ನ ಕೈಲಾದ ಸೇವೆ ಮಾಡುತ್ತಿದ್ದೇನೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿ ಮುನ್ನಡೆಯಬೇಕೆಂದು ಹಿತ ನುಡಿದರು. ಗ್ರಾಮ ಪಂಚಾಯತ ಸದಸ್ಯರಾದ ಮಂಜುನಾಥ ಜನ್ನುರವರು ಮಾತನಾಡಿ ಶ್ರೀನಿವಾಸ ನಾಯಕರವರು ಸ್ಕೂಲ್ ಬ್ಯಾಗ್‍ಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಅನುಕೂಲತೆ ಒದಗಿಸುವುದರೊಂದಿಗೆ ಅನೇಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.
ಕಳೆದ ಎಂಟು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ವಿತರಿಸುತ್ತಾ ಬಂದಿರುವ ಶ್ರೀನಿವಾಸ ನಾಯಕ ಅವರನ್ನು ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟಿನಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆಯವರು ಮಾತನಾಡಿ ಇದೊಂದು ಅರ್ಥಪೂರ್ಣ ಕಾರ್ಯಕ್ರಮವಾಗಿದೆ. ಹಿಂದುಳಿದ ಈ ಭಾಗದಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯಬೇಕಿದ್ದು ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿವೆ ಎಂದು ಮಾರ್ಮಿಕವಾಗಿ ನುಡಿದು ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಪರಿಸರದ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಸ್ವಚ್ಛ ಭಾರತ ಅಭಿಯಾನದ ಕುರಿತು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಶ್ರೀನಿವಾಸ ನಾಯಕರವರಿಂದ ಈ ಕಾರ್ಯಕ್ರಮ ದೊಡ್ಡ ಪ್ರಮಾಣದಲ್ಲಿ ನಡೆಯಲಿ. ಅದಕ್ಕೆ ನಾವು ಕೈ ಜೋಡಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಆನಂದು ಕವರಿ, ನಾರಾಯಣ ನಾಯಕ ರಾಕುಮನೆ, ಗಣಪತಿ ಅಂಬಿಗ, ನಾಗೇಶ ಗುನಗ, ನಾಗರಾಜ ತಾಂಡೇಲ, ಗಣೇಶ ಗೌಡ, ರಾಮು ಗೌಡ, ಪಾಂಡುರಂಗ ನಾಯ್ಕ, ಅರುಣ ಕವರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಮುಖ್ಯಾಧ್ಯಾಪಕಿ ಪದ್ಮಾ ನಾಯಕ ವಂದಿಸಿದರು. ಎಸ್. ಎಸ್. ಹೆಗಡೆ ನಿರೂಪಿಸಿದರು.

watermarked 20170810 113045

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Kumta News Tagged With: |, ಅಭಿಜಿತ, ಅರ್ಥಪೂರ್ಣವಾಗಿ, ಕಿರಿಯ, ಗಂಗಾ, ಗಂಗಾವಳಿ, ಜರುಗಿದ, ನಾಯಕ, ನಾಯಕರ, ಪ್ರಾಥಮಿಕ, ಪ್ರಾಯೋಜಕತ್ವದಲ್ಲಿ, ಮಾತಾ, ವಿತರಣಾ, ಶಾ, ಶ್ರೀನಿವಾಸ, ಸಮಾರಂಭ, ಸರಕಾರಿ, ಸ್ಕೂಲಬ್ಯಾಗ್, ಸ್ಮರಣಾರ್ಥ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,058 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...