ಹೊನ್ನಾವರ:
“ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮನುಷ್ಯ ಆರೋಗ್ಯವಂತನಾಗಿ ಉತ್ತಮ ಜೀವನ ನಡೆಸಬಹುದು’ಎಂದು ಅರೋಗ್ಯ ವೈದ್ಯಾಧಿಕಾರಿ ಡಾ.ವಿವೇಕ ಭಗತ್ ಅಭಿಪ್ರಾಯಪಟ್ಟರು.
ಪ್ರಾಥಮಿಕ ಆರೋಗ್ಯ ಕೇಂದ್ರ ಖರ್ವಾ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಯೂಥ್ ರೆಡ್ ಕ್ರಾಸ್ ಆಶ್ರಯದಲ್ಲಿ ಖರ್ವಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,”ಸ್ವಚ್ಛತೆಯ ಕುರಿತಂತೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ’ ಎಂದು ಹೇಳಿದರು.
ಪ್ರಾಚಾರ್ಯ ಪ್ರೊ.ಎಸ್.ಎಸ್.ಹೆಗಡೆ ಮಾತನಾಡಿ,”ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಜೀವನದ ಪರೀಕ್ಷೆಯನ್ನು ಎದುರಿಸಲು ಸಿದ್ಧತೆ ನಡೆಸಬೇಕು’ಎಂದು ಸಲಹೆ ನೀಡಿದರು.
ಪ್ರೊ.ಸಂಜೀವ ನಾಯಕ ಉಪಸ್ಥಿತರಿದ್ದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರೊ.ಸುರೇಶ ಎಸ್.ಪ್ರಾಸ್ತಾವಿಕವಾಗಿ ಮಾತನಾಡಿದರು.ಯೂತ್ ರೆಡ್ಕ್ರಾಸ್ನ ಸಂಚಾಲಕ ಪ್ರೊ.ಎಂ.ಜಿ.ಹೆಗಡೆ ವಂದಿಸಿದರು.
Leave a Comment