ಕಾರವಾರ:
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಗಾಯಗೊಂಡ ಘಟನೆ ತಾಲೂಕಿನ ಸದಾಶಿವಗಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ.
ಸದಾಶಿವಗಡದಲ್ಲಿರುವ ಅಮ್ಮ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಟೊಂಪೊಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಗುದ್ದಿದೆ. ಇದರಿಂದ ಟೆಂಪೋದ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮೂವರು ಮಕ್ಕಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯವಾಗಿದೆ. ತಕ್ಷಣ ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಟಿಪ್ಪರನ್ನು ವಶಕ್ಕೆ ಪಡೆಯಲಾಗಿದೆ ಎಂದು ಚಿತ್ತಾಕುಲ ಠಾಣಾ ಪಿಎಸ್ಐ ಕುಸುಮಾಧರ್ ತಿಳಿಸಿದ್ದಾರೆ.
Leave a Comment