ಕಾರವಾರ: ವಿವಿಧ ಅಂಗನವಾಡಿ ಕೇಂದ್ರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಮಾತೃಪೂರ್ಣ ಯೋಜನೆಯ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅಂಗನವಾಡಿಗಳ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಲು ಕೆಲವು ಅಂಗನವಾಡಿಗಳಿಗೆ ಭೇಟಿ ನೀಡಿದರು. ತಾಲೂಕಿನ ಶಿವಾಜಿ ಚೌಕ, ಬಂಗಾರಪ್ಪ ನಗರ1 ಹಾಗೂ ಬಂಗಾರಪ್ಪ ನಗರ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಕುಶಲೋಪರಿ ವಿಚಾರಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಸಾಮಗ್ರಿಗಳ ಶೇಖರಣೆ ವ್ಯವಸ್ಥಿತವಾಗಿದೆಯೇ ಎಂಬುದನ್ನು ಪರಿಶೀಲಿಸಿದರು. ಬಳಿಕ ಮಕ್ಕಳೊಂದಿಗೆ ಕೆಲವು ಸಮಯ ಆಟ ಆಡುವ ವಿಚಾರಗಳನ್ನು ಚರ್ಚಿಸಿದರು.
ಶಿರವಾಡದ ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಾಜೇಂದ್ರ ಬೇಕಲ್, ಶಿಶು ಅಬಿವೃದ್ಧಿ ಯೋಜನಾಧಿಕಾರಿ ಟಿ.ಎಚ್.ನಾಯ್ಕ, ಮೇಲ್ವಿಚಾರಕಿ ಜ್ಯೋತಿ ನಾಗೇಕರ ಮುಂತಾದವರು ಇದ್ದರು.
Leave a Comment