ಕಾರವಾರ:
ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿರುವ ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆಗೊಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ರವೀಂದ್ರನಾಥ ಟಾಗೋರ ಕಡಲ ತೀರಗಳ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಮಿತಿಯ ಸಹಕಾರದೊಂದಿಗೆ ಈ ಕಿರುಪುಸ್ತಕದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.
ಈ ಹಿಂದೆ ಇದ್ದ ಕಡಲ ತೀರಕ್ಕೂ ಹಾಗೂ ಸಮಿತಿಯ ರಚನೆಯಾದ ನಂತರ ಈಗಿರುವ ಕಡಲತೀರಕ್ಕೂ ತುಂಬ ಬದಲಾವಣೆಗಳು ಆಗಿವೆ. ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದ್ದು ಪ್ರವಾಸಿಗರನ್ನು ಸೆಳೆಯುತ್ತಿವೆ. ಜಿಲ್ಲೆಯ ಪ್ರವಾಸಿ ತಾಣಗಳನ್ನು ಅಭಿವೃದ್ದಿ ಪಡಿಸಲು ಯೋಜನೆಗಳನ್ನು ರೂಪಿಸಲಾಗಿದೆ. ಪ್ರಮುಖ ಧಾರ್ಮಿಕ, ನೈಸರ್ಗಿಕ ಪ್ರವಾಸಿ ತಾಣಗಳಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ರೂಪಿಸಲಾಗುತ್ತದೆ. ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅವುಗಳ ನಿರ್ವಹಣೆಗೂ ಸೂಕ್ತ ಯೋಜನೆಗಳನ್ನು ರೂಪಿಸಲಾಗಿದೆ. ಅಲ್ಲದೆ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅವರು ತಿಳಿಸಿದರು.
Leave a Comment