ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು.
ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ ಎಂದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಧು ಬಂಗಾರಪ್ಪ, ಸೂಚನೆಯಂತೆ ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಬಲಪಡಿಸಲಾಗುತ್ತಿದೆ. ಯುವಕರಿಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಕುಮಟಾ, ಶಿರಸಿ, ಹೊನ್ನಾವರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಜೆಡಿಎಸ್ ಸೇರುತಿದ್ದಾರೆ. ಅದೆ ರಿತಿ ಎಲ್ಲ ತಾಲೂಕುಗಳಲ್ಲಿಯೂ ಪಕ್ಷವನ್ನು ಇನ್ನಷ್ಟು ಬಲಪಡಿಸಲಾಗುತ್ತಿದೆ ಎಂದು ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಜೆಡಿಎಸ್ 5 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಈಗಾಗಲೇ ಪ್ರಬಲ ಆಕಾಂಕ್ಷಿಗಳಿದ್ದು, ಇನ್ನು ಕೆಲ ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತಿದೆ. ಈ ಹಿಂದೆ ಪಕ್ಷದಲ್ಲಿದ್ದು ಬೇರೆ ಪಕ್ಷಕ್ಕೆ ತೆರಳಿದವರಿಂದ ಯಾವುದೇ ತೊಂದರೆಯಾಗಿಲ್ಲ. ಆದರೆ ಬಿಜೆಪಿಗೆ ತೆರಳಿದ್ದ ದಿನಕರ್ ಶೆಟ್ಟಿ ಅವರಿಗೆ ಪಕ್ಷವನ್ನು ಬಿಟ್ಟಿರುವುದು ತಲೆನೋವಾಗಿದೆ. ಪ್ರತಿ ಭಾರಿಯು ಕೊನೆ ಕ್ಷಣದಲ್ಲಿ ಕೈ ಕೊಡುವ ಅಭ್ಯರ್ಥಿಗಳನ್ನು ಬಿಟ್ಟು ಕ್ಷೇತ್ರದಲ್ಲಿದ್ದು ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡುವವರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು. ಜೆಡಿಎಸ್‍ನ ಮುಖಂಡ ಮಂಜುನಾಥ ನಾಯ್ಕ ಮಾತನಾಡಿ, ಕಾರವಾರ ಸೇರಿದಂತೆ ಕೆಲ ಭಾಗಗಳಲ್ಲಿ ಜೆಡಿಎಸ್ ಕಾರ್ಯಚಟುವಟಿಕೆಗಳು ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಯುವಕರನ್ನು ಆಕರ್ಷಿಸಿ ಪಕ್ಷವನ್ನು ಬಲಪಡಿಸಲಾಗುತ್ತಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್ ಅವರನ್ನು ಕರೆತರಲು ಪ್ರಯತ್ನ ನಡೆಸಲಾಗಿದ್ದು, ಈ ಬಗ್ಗೆ ರಾಜ್ಯದ ನಾಯಕರು ಚರ್ಚೆ ನಡೆಸಿದ್ದಾರೆ ಎಂದರು.
ಜೆಡಿಎಸ್ ಇನ್ನೊರ್ವ ಮುಖಂಡ ಪುರುಷೋತ್ತಮ ಸಾವಂತ ಮಾತನಾಡಿ, ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಎಲ್ಲರು ಬೆಂಬಲಿಸಬೇಕು. ರಾಜ್ಯದ ಅಭಿವೃದ್ಧಿಗೆ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಕುಮಾರಸ್ವಾಮಿ ರೈತರ ಮಕ್ಕಳಿಗೆ ಮಿಸಲಾತಿ ಕಲ್ಪಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಹೇಳಿದರು. ಜೆಡಿಎಸ್ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ನಿತಿನ್ ಹರಿಕಂತ್ರ ಅವರನ್ನು ಪಕ್ಷದ ಸಾಲು ಹೊದಿಸಿ ಬರಮಾಡಿಕೊಳ್ಳಲಾಯಿತು. ಜಿಲ್ಲಾ ಕಾರ್ಯಾಧ್ಯಕ್ಷ ಗಜು ಆರ್ ನಾಯ್ಕ, ಸುಶಾಂತ ಹರಿಕಂತ್ರ, ಸುಭಾಸ್ ತಾಂಡೇಲ, ಪ್ರೀತಮ್ ತಾಂಡೇಲ, ಸಾಗರ ನಾಯ್ಕ, ರೋಹನ ನಾಯ್ಕ, ಇಬ್ರಾಹಿಂ ಶೇಖ್, ಎಡವಿನ್ ಟೆಲಿಸ್, ರಾಜುವೀರ ತಳೇಕರ್, ನಿತೀಶ್ ಹರಿಕಂತ್ರ ಇತರರಿದ್ದರು.
Leave a Comment