ಕಾರವಾರ: ಮಾನಸಿಕ ಕಿನ್ನತೆಯಿಂದ ಬಳಲುತ್ತಿದ್ದ ವೃದ್ಧೆಯೊರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದರದ ಮೂಳೆಗದ್ದೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮೂಳೆಗದ್ದೆ ನಿವಾಸಿ ಗುಲಾಬಿ ಗೌಡ(64) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರ ಪುತ್ರ 3 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದನು. ಪುತ್ರ ಶೋಕದಿಂದ ಅವರು ಮಾನಸಿಕ ಕಿನ್ನತೆಗೆ ಒಳಗಾಗಿದ್ದಳು. ಶುಕ್ರವಾರ ತನ್ನ ಪುತ್ರನ ಶವ ಸಂಸ್ಕಾರ ಮಾಡಿದ ಸ್ಥಳಕ್ಕೆ ತೆರಳಿ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Leave a Comment