ಕಾರವಾರ: ಕೆರವಡಿಯ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ ನಡೆಯಿತು.
ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ ಭಜಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರವಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಕಲಗುಜ್ಜಿ, ಕೆರವಡಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಪ್ರವೀಣಾ ಗಾವಸ್ ವೇದಿಕೆಯಲ್ಲಿದ್ದರು. ಕೆರವಡಿ ಗ್ರಾಮ ಪಂಚಾಯತ ಅಧ್ಯಕ್ಷ ಕಿರಣ ಆರ್. ಅಸ್ನೋಟಿಕರ ಅಧ್ಯಕ್ಷತೆ ವಹಿಸಿದ್ದರು.
ಮಹಾವಿದ್ಯಾಲಯದ ಪ್ರಾಚಾರ್ಯ ಪ್ರಕಾಶ ಕೆ. ರಾಣೆ ಸ್ವಾಗತಿಸಿದರು. ನೇತ್ರಾವತಿ ಸಂಗಡಿಗರು ರಾಷ್ಟ್ರೀಯ ಸೇವಾ ಯೋಜನೆಯ ಗೀತೆ ಹಾಡಿದರು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಬಸವರಾಜ ನಡಗೇರಿ ನಿರ್ವಹಿಸಿದರು. ಸೋನಾಲಿ ಗೋವೆಕರ ವಂದಿಸಿದರು.
Leave a Comment