• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾವಿನಕುರ್ವಾ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2017-18

August 24, 2017 by Gaju Gokarna Leave a Comment

ಹೊನ್ನಾವರ ; ತಾಲೂಕಾ ಮಾವಿನಕುರ್ವಾ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2017-18 ವಿಷ್ಣು ಶಾಸ್ತ್ರಿ ಕ್ರೀಡಾಂಗಣ ಖರ್ವಾ ಕೊಳಗದ್ದೆಯಲ್ಲ್ಲಿ ನಡೆಯಿತು.

ಕ್ರೀಡಾಕೂಟವನ್ನು ಜಿ.ಪಂ. ಸದಸ್ಯ ಸವಿತಾ ಕೃಷ್ಣ ಗೌಡ ಉದ್ಘಾಟಿಸಿ ಮಾತನಾಡಿ ಕ್ರೀಡೆ ಮನುಷ್ಯನ ಜೀವನಕ್ಕೆ ಅತ್ಯಂತ ಅಮೂಲ್ಯವಾದುದು, ಗ್ರಾಮೀಣ ಕ್ರೀಡಾ ಪ್ರತಿಭೆಗಳು ಇಂಥಹ ಕ್ರೀಡಾಕೂಟದ ಮೂಲಕ ಹೊರ ಬರಲಿ ಎಂದು ಹಾರೈಸಿದರು.

ಅಧ್ಯಕ್ಷತೆ ತಿಲಕ ಜೆ. ಗೌಡ ಅಧ್ಯಕ್ಷರು, ಗ್ರಾ.ಪಂ. ಮಾವಿನಕುರ್ವಾ ಇವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಮಾತನಾಡಿ ಇಲಾಖಾ ಕ್ರೀಡಾ ಕೂಟಗಳಿಗೆ ಇಲಾಖೆಯಿಂದ ಕೊಡುವ ಹಣಕಾಸಿನ ನೆರವು ಅತ್ಯಂತ ಕಡಿಮೆ. ಈ ಬಗ್ಗೆ ನಮ್ಮ ಜನಪ್ರತಿನಿಧಿಗಳು ಇಂತಹ ಕ್ರೀಡಾಕೂಟಗಳಿಗೆ ಹೆಚ್ಚು ನೆರವು ನೀಡಿ ಗ್ರಾಮೀಣ ಕ್ರೀಡಾಪಟುಗಳಿಗೆ ಒಂದು ಉತ್ತಮ ವೇದಿಕೆ ಒದಗಿಸಬೇಕು ಕ್ರೀಡಾಕೂಟವನ್ನು ಅತ್ಯಂತ ಯಶಸ್ವಿಯಾಗಿ ಸಂಘಟಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇಂತಹ ಕ್ರೀಡಾಕೂಟಗಳು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ನಿಕಟಪೂರ್ವ ಜಿ.ಪಂ. ಸದಸ್ಯರಾದ ಕೃಷ್ಣ ಜೆ. ಗೌಡ, ಚಿಕ್ಕನಕೋಡ ಪಂಚಾಯತ ಅಧ್ಯಕ್ಷೆ ನಾಗವೇಣಿ ನಾಯ್ಕ, ತಾ.ಪಂ. ಸದಸ್ಯರಾದ ಲೋಕೇಶ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿ ಬಿ.ಶಿರಸಿ, ಸಮನ್ವಯಾಧಿಕಾರಿಗಳಾದ ಶ್ರೀ ಜಿ.ಎಸ್. ನಾಯ್ಕ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀ ಎಸ್.ಎನ್. ಗೌಡ, ಸೈಯದ್ ಅಲಿ, ಫಿರ್ಯಾದೆ, ಶಿಕ್ಷಣ ಸಂಯೋಜಕರಾದ ಆರ್.ಪಿ.ಹರಿಜನ, ಶಿಕ್ಷಕ ಸಂಘದ ಅಧ್ಯಕ್ಷರಾದ ಎನ್.ಎಸ್. ನಾಯ್ಕ, ಸುದೀಶ ನಾಯ್ಕ, ಕೆ.ಜಿ. ಗೌಡ, ಸಾಧನಾಬರ್ಗಿ, ಪಿ.ಎಲ್. ಚಲವಾದಿ ಹಾಗೂ ಸಿ.ಆರ್.ಪಿ ಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅತ್ಯಂತ ಪ್ರಾಮಾಣಿಕ ಸೇವೆ ಸಲ್ಲಿಸಿ ಶಿಕ್ಷಕರ ಮೆಚ್ಚುಗೆಗಳಿಸಿದ ಹೊನ್ನಾವರ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಎಸ್.ಎನ್. ಗೌಡ ಇವರನ್ನು ಸನ್ಮಾನಿಸಲಾಯಿತು. ಹಾಗೂ ಹೊನ್ನಾವರದ ನೂತನ ಬಿ.ಇ.ಒ ಆಗಿ ಅಧಿಕಾರ ವಹಿಸಿಕೊಂಡ ಗಿರೀಶ ಪದಕಿ ಇವರಿಗೆ ಸ್ವಾಗತ ಕೋರಲಾಯಿತು.

ಕ್ರೀಡಾಕೂಟದ ಸಂಚಾಲಕರಾದ ಎಮ್.ಜಿ. ನಾಯ್ಕ ಇವರು ಸ್ವಾಗತಿಸಿದರು, ಆರ್.ಬಿ. ಶೆಟ್ಟಿ ಶಿಕ್ಷಕರು ಕಾರ್ಯಕ್ರಮ ನಿರೂಪಿಸಿದರು, ಎಸ್.ಜಿ ಭಟ್ ಶಿಕ್ಷಕರು ವಂದಿಸಿದರು. ಕ್ರೀಡಾಕೂಟದಲ್ಲಿ ಹಡಿನಬಾಳ, ಖರ್ವಾ, ಚಿಕ್ಕನಕೋಡ, ಗುಂಡಬಾಳ ಕ್ಲಸ್ಟರ್‍ಗಳ ಸುಮಾರು 300 ಕ್ಕೂ ಹೆಚ್ಚು ಕ್ರೀಡಾ ಪಟುಗಳು ಭಾಗವಹಿಸಿದರು.

ಮಾವಿನಕುರ್ವಾ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Other Tagged With: 2017-18, ಕ್ರೀಡಾಕೂಟದ ಮೂಲಕ ಹೊರ ಬರಲಿ, ಕ್ರೀಡೆ ಮನುಷ್ಯನ ಜೀವನಕ್ಕೆ ಅತ್ಯಂತ ಅಮೂಲ್ಯವಾದುದು, ಗ್ರಾಮೀಣ ಕ್ರೀಡಾ ಪ್ರತಿಭೆಗಳು ಇಂಥಹ, ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ, ಮಟ್ಟದ, ಮಾವಿನಕುರ್ವಾ ವಲಯ, ಹೊನ್ನಾವರ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಎಸ್.ಎನ್. ಗೌಡ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...