ಭಟ್ಕಳ: ಇಲ್ಲಿನ ಹೆಚ್ಚುವರಿ ಸಿವಿಲ್ (ಕಿರಿಯ ವಿಭಾಗ)ದಲ್ಲಿ ನ್ಯಾಯಾಧೀಶೆಯಾಗಿ ಕರ್ತವ್ಯವನ್ನು ನಿರ್ವಹಿಸಿ ವರ್ಗಾವಣೆಯಾದ ನ್ಯಾಯಾಧೀಶೆ ದೀಪಾ ಅವರಿಗೆ ವಕೀಲರ ಸಂಘದ ವತಿಯಿಂದ ಅಭಿನಂದಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಹಿರಿಯ ನ್ಯಾಯವಾದಿ ಎಂ. ಎಲ್. ನಾಯ್ಕ ವಹಿಸಿದ್ದರು.
ವಕೀಲರ ಸಂಘದ ವತಿಯಿಂದ ಅಭಿನಂದನೆ ಹಾಗೂ ಬೀಳ್ಕೊಡುಗೆಯನ್ನು ಸ್ವೀಕರಿಸಿದ ನ್ಯಾಯಾಧೀಶೆ ದೀಪಾ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಪಾಂಡು ಜಿ. ನಾಯ್ಕ ಉಪಸ್ಥಿತರಿದ್ದರು.
ವಕೀಲರ ಸಂಘದ ಹಿರಿಯ ನ್ಯಾಯವಾದಿ ಆರ್. ಆರ್. ಶ್ರೇಷ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನ್ಯಾಯವಾದ ಎಂ.ಜೆ.ನಾಯ್ಕ ಸ್ವಾಗತಿಸಿದರು, ಎಂ.ಟಿ.ನಾಯ್ಕ ವಂದಿಸಿದರು.
Leave a Comment