ಕಾರವಾರ:
ಮಕ್ಕಳಲ್ಲಿನ ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ನ್ಯಾಯವಾದಿ ಸಂಜಯ ಸಆಳುಂಕೆ ಹೇಳಿದರು.
ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದಲ್ಲಿ ನಡೆದ ಕಸ್ಟರ್ ಮಟ್ಟದ ಪ್ರಾಥಮಿಕ ಹಂತದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು
ಪ್ರತಿಯೊಂದು ಮಗು ಒಂದೊಂದು ಪ್ರತಿಭೆಯ ಗಣಿಯಾಗಿದೆ. ಮಕ್ಕಳ ಪ್ರತಿಭೆಯನ್ನು ಹೊರ ಹಾಕಲು ವೇದಿಕೆ ಅವಷ್ಯಕತೆ ಇದೆ ಎಂದು ಅವರು ಹೇಳಿದರು. ಗಾ.ಪಂ ಸದಸ್ಯ ಮಾರುತಿ ನಾಯ್ಕ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ದಿವೇಶ ನಾಯ್ಕ ಮತ್ತು ಮುಖ್ಯಾಧ್ಯಾಪಕ ದಿನೇಶ ಗಾಂವಕರ ವೇದಿಕೆಯಲ್ಲಿದ್ದು ಮಾತನಾಡಿದರು. ಅಸ್ನೋಟಿ ಗ್ರಾ. ಪಂ. ಅಧ್ಯಕ್ಷೆ ರೇಷ್ಮಾ ತಳೇಕರ ಅಧ್ಯಕ್ಷತೆ ವಹಿಸಿದ್ದರು. ಸಿ ಆರ್ ಪಿ ರೇಷ್ಮಾ ಗಾಂವಕರ ಸ್ವಾಗತಿಸಿದರು. ಶಿಕ್ಷಕಿ ಸುಧಾ ನಾಯ್ಕ ನಿರ್ವಹಿಸಿದರು. ಶಿಕ್ಷಕಿ ಮಂಜುಳಾ ಗೌಡಾ ವಂದಿಸಿದರು.
Leave a Comment