ಕಾರವಾರ:
ಕನ್ನಡ ಪುಸ್ತಕ ಪ್ರಾಧಿಕಾರವು 2016ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 11 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಡಿಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ ದೃಡಿಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಡೀಕರಣ ಪತ್ರ ನೀಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು 560002 ಅವರಿಗೆ ಕಳುಹಿಸಿಕೊಡಲು ಕೋರಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22017704 ಸಂಪರ್ಕಿಸಬಹುದು.
Leave a Comment