ಕಾರವಾರ:
ಜಿಲ್ಲಾ ಪಂಚಾಯತ , ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾಲೂಕಾ ಯೋಜನಾ ಸಮನ್ವಯಾಧೀಕಾರಗಳ ಕಾರ್ಯಾಲಯ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 9 ರಂದು ಬೆಳಗ್ಗೆ 9-30ಕ್ಕೆ ಮಾಲಾದೇವಿ ಕ್ರೀಡಾಂಗಣದಲ್ಲಿ 2017-18ನೇ ಸಾಲಿನ ಕಾರವಾರ ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಆಯೋಜಿಸಲಾಗಿದೆ.
ಶಾಸಕ ಸತೀಶ ಸೈಲ್ ಕ್ರೀಡಾಕೂಟಗಳಿಗೆ ಚಾಲನೆ ನೀಡುವರು. ತಾಲೂಕ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಕೆ.ಪ್ರಕಾಶ, ಕಾರವಾರ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಸೇರಿದಂತೆ ಇನ್ನಿತರ ಗಣ್ಯ ವ್ಕ್ಯಕ್ತಿಗಳು ಭಾಗವಹಿಸಲಿದ್ದಾರೆ
Leave a Comment