• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು;ಸಚಿವ ಆರ್.ವಿ.ದೇಶಪಾಂಡೆ

September 6, 2017 by Sachin Hegde Leave a Comment

ಹಳಿಯಾಳ ; ಉತ್ತಮ ಯುವಕರನ್ನು ನಿರ್ಮಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಜನಪ್ರತಿನಿಧಿಗಳ ಮೇಲೆ ಇದ್ದು ಪ್ರಸ್ತುತ ಶಿಕ್ಷಣಕ್ಕೆ ತುಂಬ ಮಹತ್ವ ಬಂದಿದ್ದು ಅದನ್ನು ಅರಿತು ಪಾಲಕರು ಮತ್ತು ಶಿಕ್ಷಕರು ಶೈಕ್ಷಣಿಕ ರಂಗದಲ್ಲಿ ಆಸಕ್ತಿವಹಿಸಿ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕಾ ಶಿಕ್ಷಕರ ದಿನೋತ್ಸವ ಆಚರಣಾ ಸಮಿತಿ, ತಾಲೂಕಾ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಕರ ಸಂಘ ಮತ್ತು ಹಳಿಯಾಳ ಮತ್ತು ದಾಂಡೇಲಿಯ ಸರಕಾರಿ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಕಾರ್ಮೆಲ್ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮ ದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಸಚಿವರು ಮಾತನಾಡಿದರು.
ಶಿಕ್ಷಣ ಮತ್ತು ಆರೋಗ್ಯವು ಸ್ವಸ್ಥ ಸಮಾಜದ ಎರಡು ಮುಖಗಳಿದ್ದಂತೆ. ಅವುಗಳನ್ನು ಶಾಲೆಯಲ್ಲಿ ನೀಡಬೇಕಾಗಿದ್ದು, ರಾಷ್ಟ್ರದ ಉಜ್ಜಲ್ ಭವಿಷ್ಯವು ಶಿಕ್ಷಕರ ಕೈಯಲ್ಲಿದೆ. ಕಲಿಯುವ ಆಸಕ್ತಿವಿರುವವರಿಗೆ ಸರಕಾರವು ಸೈಕಲ್ ವಿತರಣೆ, ಉಚಿತವಾಗಿ ಸಮವಸ್ತ್ರ, ಶೂ, ಕುಡಿಯಲು ಹಾಲು, ಹಾಸ್ಟೇಲ್‍ಗಳ ವ್ಯವಸ್ಥೆ, ದೂರದ ಊರುಗಳಿಂದ ಆಗಮಿಸುವವರಿಗೆ ಬಸ್ ಪಾಸ್ ವ್ಯವಸ್ಥೆ, ಶಿಷ್ಯವೇತನ ಸೇರಿದಂತೆ ಇನ್ನಿತರ ಸಮಗ್ರ ಸೌಲಭ್ಯಗಳನ್ನು ನೀಡಲಾಗಿದೆ. ಜೊತೆಗೆ ತಾಲೂಕಿನ ಎಲ್ಲಾ ಶಾಲೆಗಳಿಗೆ ಒಟ್ಟೂ 600 ಕ್ಕೂ ಅಧಿಕ ಕಂಪ್ಯೂಟರ್‍ಗಳನ್ನು ಜೊತೆಗೆ ಜಮಖಾನೆಗಳನ್ನು ವಿತರಿಸಲು ಉದ್ದೇಶಿಸಲಾಗಿದೆ ಎಂದರು.
ಇಂದಿನ ವಿದ್ಯಾರ್ಥಿಗಳಿಗೆ ಕೌಶಲ್ಯದಿಂದ ಸೇರಿದ ಶಿಕ್ಷಣ ನೀಡುವುದರಿಂದ ಮುಂದಿನ ದಿನಗಳಲ್ಲಿ ಆಗುವ ನಿರುದ್ಯೋಗದ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಕೌಶಲ್ಯಗಳು ಎಲ್ಲರಿಗೂ ಸ್ವಯಂ ಉದ್ಯೋಗದತ್ತ ಸಾಗಿಸಲು ಸಹಾಯಕಾರಿಯಾಗಿವೆ ಎಂದ ಅವರು ಪಟ್ಟಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮತ್ತು ಹಲವಾರು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವಂತಹ ಗುರುಭವನದ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 10 ಲಕ್ಷ ರೂ ನೀಡುವ ಭರವಸೆಯನ್ನು ನೀಡಿ ಪಟ್ಟಣದಲ್ಲಿ ಸುಮಾರು 8 ಕೋಟಿ ರೂ ವೆಚ್ಚದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಒಟ್ಟಿನಲ್ಲಿ ಶೈಕ್ಷಣಿಕ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಇಡೀ ದೇಶದಲ್ಲಿಯೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಪ್ರತಿ ವರ್ಷ 5 ಲಕ್ಷ ಯುವ ಪಡೆಗೆ ಕೌಶಲ್ಯ ಅಭಿವೃದ್ದಿ ತರಬೇತಿ ಮತ್ತು ಅರಿವು ನೀಡಲಾಗುತ್ತಿದೆ. ಶಿಕ್ಷಣ ಮತ್ತು ಚಾರಿತ್ರದಿಂದ ಮಾತ್ರ ರಾಷ್ಟ್ರ ಪ್ರೇಮ ಉದ್ಬವಾಗಲು ಸಾಧ್ಯವಾಗಿದೆ.
ಇದೇ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಸನ್ಮಾನ, ಗುರುಚೇತನ ಕೈಪಿಡಿ ಬಿಡುಗಡೆ ಮತ್ತು ಗುರುಚೇತನ ಶಿಕ್ಷಕರ ವೃತ್ತಿಪರ ಅಭಿವೃದ್ದಿ ಯೋಜನೆಗೆ ಚಾಲನೆ ನೀಡಲಾಯಿತು. ಪ್ರಾಚಾರ್ಯರಾದ ಡಾ. ಎನ್.ತಮ್ಮಣ್ಣಗೌಡಾ ಅವರು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ, ತಾಪಂ ಅಧ್ಯಕ್ಷೆ ರೀಟಾ ಸಿದ್ದಿ, ಪುರಸಭೆ ಅಧ್ಯಕ್ಷ ಉಮೇಶ ಬೋಳಶೆಟ್ಟಿ, ಫಾದರ ಜ್ಞಾನಪ್ರಕಾಶರಾವ್, ಜಿಪಂ ಸದಸ್ಯರಾದ ಕೃಷ್ಣಾ ಪಾಟೀಲ್, ಲಕ್ಷ್ಮೀ ಕೋರ್ವೆಕರ, ತಹಶೀಲದಾರ ವಿದ್ಯಾಧರ ಗುಳಗುಳಿ, ಬಿಇಓ ಸಮೀರಅಹ್ಮದ ಮುಲ್ಲಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ನಾಯ್ಕ, ಮಾಧ್ಯಮಿಕ ಸಂಘದ ವಿಠ್ಠಲ್ ಬೋರೆಕರ, ಅಕ್ರಮ ಸಕ್ರಮ ಸಮಿತಿಯ ಸುಭಾಶ ಕೋರ್ವೆಕರ ಇತರರು ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಜವಾಬ್ದಾರಿ, ತಾಲೂಕಾ ಶಿಕ್ಷಕರ, ದಿನೋತ್ಸವ ಆಚರಣಾ ಸಮಿತಿ, ನಿರ್ಮಿಸುವ, ಪ್ರಾಮಾಣಿಕವಾಗಿ, ಮಕ್ಕಳ ಸರ್ವತೋಮುಖ ಅಭಿವೃದ್ದಿ, ಯುವ ಪಡೆಗೆ ಕೌಶಲ್ಯ, ಲಾಖೆ, ಶ್ರಮಿಸಬೇಕು, ಸಚಿವ ಆರ್.ವಿ.ದೇಶಪಾಂಡೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,058 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar