• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು

September 6, 2017 by Gaju Gokarna Leave a Comment

ಹೊನ್ನಾವರ: ಶಿಕ್ಷಕರು ಸರ್ಕಾರದ ವಿವಿಧ ಯೋಜನೆಗಳ ಒತ್ತಡದ ಕೆಲಸಗಳ ನಡುವೆಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು.
ತಾಲೂಕಿನ ಕರ್ಕಿನಾಕಾದ ಹವ್ಯಕ ಸಭಾಭವನದಲ್ಲಿ ಶಿಕ್ಷಕಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಹ್ಮ,ವಿಷ್ಣು,ಮಹೇಶ್ವರರ ಪ್ರತಿರೂಪವೇ ಶಿಕ್ಷಕರು. ದೇಶದ ಪ್ರಗತಿ ವರ್ಗ ಕೋಣೆಯಲ್ಲಿದೆ ಎಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹೇಳಿದಂತೆ ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು. ತಾಲೂಕಿನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ ಸಾಧನೆಯ ಜೊತೆ ಪಠ್ಯೇತರ ಚಟುವಟಿಕೆಯಲ್ಲೂ ಸಾಧನೆ ಮಾಡುತ್ತಿದ್ದಾರೆ. ಇದರ ಹಿಂದೆ ಶಿಕ್ಷಕರ ಪರಿಶ್ರಮವಿದೆ. ಶಿಕ್ಷಕರನ್ನು ಗೌರವಭಾವದಿಂದ ನೋಡಬೇಕು ಎಂದರು.
ಜಿ.ಪಂ.ಸದಸ್ಯ ಶಿವಾನಂದ ಹೆಗಡೆ ಮಾತನಾಡಿ, ಸಮಾಜ ಸುಧಾರಣೆಗೆ ಶಿಕ್ಷಕರ ಪಾತ್ರದೊಡ್ಡದು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.
ಸಾಧನೆ ಮಾಡಿದ, ನಿವೃತ್ತಿ ಹೊಂದಿದ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರನ್ನು ಹಾಗೂ ನಿವೃತ್ತರಾದ ಕಾಲೇಜು ಪ್ರಾಧ್ಯಾಪಕರಾದ ಡಾ. ಜಿ.ಪಿ.ಪಾಠಣಕರ್ ಮತ್ತು ವಿ.ಎಸ್.ಭಟ್ ಅವರನ್ನು ಸನ್ಮಾನಿಸಲಾಯಿತು. ತಾಲೂಕಿನ ಶಿಕ್ಷಕರ ವೇತನ ವಿವರ ನೀಡುವ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಲಾಯಿತು.
ತಾ.ಪಂ.ಅಧ್ಯಕ್ಷ ಉಲ್ಲಾಸ ನಾಯ್ಕ, ಜಿ.ಪಂ.ಸದಸ್ಯರಾದ ಪುಷ್ಪಾ ನಾಯ್ಕ, ಸವಿತಾ ಗೌಡ, ತಾ.ಪಂ.ಸದಸ್ಯರಾದ ಮೀರಾ ತಾಂಡೇಲ್, ರೂಪಾ ಗೌಡ ಲಯನ್ಸ ಕ್ಲಬ್ ಅಧ್ಯಕ್ಷ ಡಿ.ಡಿ.ಮಡಿವಾಳ, ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಎಸ್.ನಾಯ್ಕ, ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎನ್.ಗೌಡ ಇತರರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಣ ಸಮನ್ವಯಾಧಿಕಾರಿ ಜಿ.ಎಸ್.ನಾಯ್ಕ ವಂದನಾರ್ಪಣೆ ಮಾಡಿದರು. ಶಿಕ್ಷಕರಾದ ಮೋಹನ ನಾಯ್ಕ, ಕಲ್ಪನಾ ಹೆಗಡೆ, ಜಿ.ಆರ್.ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News Tagged With: ಕರ್ಕಿನಾಕಾ, ಪಾತ್ರ, ಬ್ರಹ್ಮ, ಮಹತ್ವವಾದುದು, ಮಹೇಶ್ವರರ ಪ್ರತಿರೂಪವೇ ಶಿಕ್ಷಕರು, ವಿಕಸನ, ವಿದ್ಯಾರ್ಥಿಗಳ, ವಿಷ್ಣು, ವ್ಯಕ್ತಿತ್ವದ, ಶಿಕ್ಷಕರ, ಶಿವಾನಂದ ಹೆಗಡೆ ಮಾತನಾಡಿ, ಸಭಾಭವನ, ಸಮಾಜ, ಸುಧಾರಣೆಗೆ ಶಿಕ್ಷಕರ, ಹವ್ಯಕ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,017 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar