ಭಟ್ಕಳ: ಮಾರುಕೇರಿಯ ಕೋಟಖಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಏರ್ಪಡಿಸಲಾದ ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಅಲ್ಬರ್ಟ ಡಿಕೋಸ್ತ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ. ಪ್ರತಿ ಮಕ್ಕಳಲ್ಲಿಯೂ ಒಂದಲ್ಲದೊಂದು ಪ್ರತಿಭೆ ಇದ್ದೇ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಶಿಕ್ಷಕರು, ಪಾಲಕರು ಸರಿಯಾಗಿ ಗುರುತಿಸಿ ಅವರಿಗೆ ಸೂಕ್ತ ವೇದಿಕೆ ದೊರಕಿಸಿಕೊಡಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ತಾ.ಪಂ.ಸದಸ್ಯೆ ಜಯಲಕ್ಷ್ಮೀ ಗೊಂಡ ಮಾತನಾಡಿ, ಸ್ಪರ್ಧೆಯಲ್ಲಿ ಸೋಲು ಗೆಲವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯವಾಗಿದೆ. ಪ್ರತಿಭಾ ಕಾರಂಜಿಯಿಂದ ಮಕ್ಕಳ ಪ್ರತಿಭೆ ಗುರುತಿಸಲು ಅನುಕೂಲವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಾರುಕೇರಿ ಗ್ರಾ.ಪಂ. ಉಪಾಧ್ಯಕ್ಷೆ ನಾಗಮ್ಮ ಗೊಂಡ, ಮುಖ್ಯ ಅತಿಥಿಯಾಗಿದ್ದ ಮಾರುಕೇರಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ. ಡಿ. ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರ ನಾಯ್ಕ, ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ಗೊಂಡ, ಎಸ್ಡಿಎಂಸಿ ಸದಸ್ಯ ಸೋಮಶೇಖರ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಎಸ್.ಪಿ. ಭಟ್ಟ, ಗ್ರಾ.ಪಂ. ಸದಸ್ಯ ಮೋಹನ ಗೊಂಡ, ಸಾಹಿತಿ ಗೋವಿಂದ ಶೆಟ್ಟಿ ಮಾತನಾಡಿದರು.
ವೇದಿಕೆಯಲ್ಲಿ ಗ್ರಾ.ಪಂ. ಸದಸ್ಯೆ ಸೋಮಿ ಗೊಂಡ, ಐಇಆರ್ಟಿ ಶಿಕ್ಷಕ ಗೋಪಾಲ ನಾಯ್ಕ, ಸಿ.ಆರ್.ಪಿ. ರಾಮಯ್ಯ ಗೊಂಡ ಮುಂತಾದವರಿದ್ದರು.
ಸಂಸ್ಕøತ ಮತ್ತು ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಮೇಘಾ ಶ್ರೀಧರ ಹೆಬ್ಬಾರ ಇವಳನ್ನು ಗೌರವಿಸಿ ಸನ್ಮಾನಿಸಲಾಯಿತು. ಕೋಟಖಂಡ ಶಾಲೆಯ ಮುಖ್ಯಶಿಕ್ಷಕ ಟಿ. ಎಲ್. ನಾಯ್ಕ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಚಿದಾನಂದ ಪಟಗಾರ ನಿರೂಪಿಸಿದರು. ಸಿಆರ್ಪಿ ದಿನೇಶ ವಂದಿಸಿದರು.
Leave a Comment