• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಂಗಳೂರು ಚಲೋ ಬೈಕ್ ರ‍್ಯಾಲಿ;ಬಿ.ಜೆ.ಪಿ. ಕಾರ್ಯಕರ್ತರ ಬಂಧನ

September 7, 2017 by Sachin Hegde Leave a Comment

ಭಟ್ಕಳ: ಉದ್ದೇಶಿತ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಭಟ್ಕಳದಲ್ಲಿ ತಡೆಯೊಡ್ಡಿದ ಪೊಲೀಸರು ನೂರಾರು ಬಿ.ಜೆ.ಪಿ. ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಸಿದ್ದಾಪುರ ಅವರ ನೇತೃತ್ವದಲ್ಲಿ ಮಂಗಳೂರಿಗೆ ಬೈಕ್ ರ್ಯಾಲಿಯ ಮೂಲಕ ಹೊರಡಲು ಸಿದ್ದರಾದ ಕಾರ್ಯಕರ್ತರನ್ನು ಸರಕಾರ ಪರವಾನಿಗೆ ನೀಡದಿರುವ ಹಿನ್ನೆಲೆಯಲ್ಲಿ ಭಟ್ಕಳದಲ್ಲಿಯೇ ತಡೆದ ಪೊಲೀಸರು ಎಲ್ಲರನ್ನು ಬಂಧಿಸಿರುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ. ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆದು, ಶಂಶುದ್ಧೀನ್ ಸರ್ಕಲ್‍ನಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲ ಕಾಲ ಬಂದ್ ಆಯಿತು. ಆದರೂ ಪಟ್ಟು ಬಿಡದ ಬಿ.ಜೆ.ಪಿ. ಕಾರ್ಯಕರ್ತರು ಪೊಲೀಸರೊಂದಿಗೆ ಸೆಣಸಿ ಮುಂದೆ ನುಗ್ಗಲು ಪ್ರಯತ್ನಿಸಿದರಾದರೂ ಫಲ ನೀಡಲಿಲ್ಲ. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ರಾಜ್ಯ ಸರಕಾರ ಒಬ್ಬರಿಗೊಂದು ನ್ಯಾಯ ಇನ್ನೊಬ್ಬರಿಗೊಂದು ನ್ಯಾಯ ಎನ್ನುವ ಧೋರಣೆ ತಳೆದಿದೆ. ಕೇವಲ ಸಂಘ ಪರಿವಾರದವರನ್ನೇ ಗುರಿಯಾಗಿಸಿ ಹತ್ಯೆಗೈಯಲು ಸರಕಾರ ಧೋರಣೆಯೇ ಕಾರಣವಾಗಿದೆ. ಇದನ್ನು ಖಂಡಿಸಿ ನಡೆಸುತ್ತಿರುವ ಬೈಕ್ ರ್ಯಾಲಿಯನ್ನು ಹತ್ತಿಕ್ಕಿ ವಿಫಲಗೊಳಿಸಲು ಮುಂದಾದ ಸರಕಾರ ತಕ್ಕ ಪಾಠ ಕಲಿಯಲಿದೆ ಎಂದರು.
ಮಾಜಿ ಶಾಸಕ ಜೆ.ಡಿ.ನಾಯ್ಕ, ಭಟ್ಕಳ ಬಿಜೆಪಿ ಅಧ್ಯಕ್ಷ ರಾಜೇಶ ನಾಯ್ಕ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಜನ್ನು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ, ಸೂರಜ್ ನಾಯ್ಕ ಸೋನಿ, ಸುನಿಲ್ ಬಿ. ನಾಯ್ಕ, ಭಟ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ನಾಯ್ಕ, ಸುಬ್ರಾಯ ದೇವಡಿಗ, ಭಾಸ್ಕರ ದೈಮನೆ, ರವಿ ನಾಯ್ಕ ಜಾಲಿ, ಮಂಜುನಾಥ ನಾಯ್ಕ ಜಾಲಿ, ದಾಸ ನಾಯ್ಕ ತಲಗೋಡ, ಧನ್ಯಕುಮಾರ ಜೈನ್, ಸಂತೋಷ ನಾಯ್ಕ ಮುರುಡೇಶ್ವರ, ಹನ್ಮಂತ ನಾಯ್ಕ, ಮೋಹನ ನಾಯ್ಕ, ಮೂರ್ತಿ ಭಟ್, ಲಕ್ಷ್ಮೀನಾರಾಯಣ ನಾಯ್ಕ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು. ಪೊಲೀಸರು ಬಂಧಿತರನ್ನು ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ತುಂಬಿಸಿಕೊಂಡು ಕರೆದುಕೊಂಡು ಹೋದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್, ಹೆಚ್ಚುವರಿ ಎಸ್ಪಿ ಗೋಪಾಲ ಬ್ಯಾಕೋಡ್, ಡಿವಾಯ್‍ಎಸ್ಪಿ ಶಿವಕುಮಾರ, ಸಿಪಿಐ ಸುರೇಶ ನಾಯಕ್ ನೇತೃತ್ವದಲ್ಲಿ ಸಿವಿಲ್ ಹಾಗೂ ಕಾಯ್ದಿಟ್ಟ ಪೊಲೀಸ್ ಪಡೆ ಬಂದೋಬಸ್ತ ಎರ್ಪಡಿಸಿತ್ತು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News Tagged With: ಈ ಸಂದರ್ಭ, ಉದ್ದೇಶಿತ, ಘೋಷಿಸಿದರು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಜನ್ನು, ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಸಿದ್ದಾಪುರ ಅವರ ನೇತೃತ್ವ, ದಾಸ ನಾಯ್ಕ ತಲಗೋಡ, ಧನ್ಯಕುಮಾರ ಜೈನ್, ಬಂಧನ, ಬಿ.ಜೆ.ಪಿ. ಕಾರ್ಯಕರ್ತರ, ಭಟ್ಕಳ ಬಿಜೆಪಿ ಅಧ್ಯಕ್ಷ ರಾಜೇಶ ನಾಯ್ಕ, ಭಟ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ನಾಯ್ಕ, ಭಟ್ಕಳದಲ್ಲಿ ತಡೆಯೊಡ್ಡಿದ ಪೊಲೀಸರು, ಭಾಸ್ಕರ ದೈಮನೆ, ಮಂಗಳೂರು ಚಲೋ ಬೈಕ್ ರ‍್ಯಾಲಿ, ಮಂಜುನಾಥ ನಾಯ್ಕ ಜಾಲಿ, ಮೂರ್ತಿ ಭಟ್, ಮೋಹನ ನಾಯ್ಕ, ರವಿ ನಾಯ್ಕ ಜಾಲಿ, ಲಕ್ಷ್ಮೀನಾರಾಯಣ, ಸಂತೋಷ ನಾಯ್ಕ ಮುರುಡೇಶ್ವರ, ಸುನಿಲ್ ಬಿ. ನಾಯ್ಕ, ಸುಬ್ರಾಯ ದೇವಡಿಗ, ಸೂರಜ್ ನಾಯ್ಕ ಸೋನಿ, ಹನ್ಮಂತ ನಾಯ್ಕ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar