ಕಾರವಾರ ಸೆಪ್ಟಂಬರ್ 12 : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ JEE/ NEET/ GATE/ GRE ಮುಂತಾದ ಪರೀಕ್ಷೆಗಳ ಮೂಲಕ ರಾಷ್ಟ್ರ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸೆಪ್ಟಂಬರ್ 26 ರೊಳಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಾರವಾರ ಇವರಿಗೆ ಅರ್ಜಿಯನ್ನು ಸಲ್ಲಿಸಲು ಕೋರಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳಿಗೆ ಅಥವಾ ದೂರವಾಣಿ ಸಂಖ್ಯೆ: 08382-226514 ಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
Leave a Comment