ಕಾರವಾರ: ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸದೇ ಅವರನ್ನು ಶಾಲೆಗೆ ಕಳುಹಿಸಿ ಮುಖ್ಯವಾಹಿನಿಗೆ ತರಬೇಕು ಎಂದು ಬಾಲ ಕಾರ್ಮಿಕ ಯೋಜನಾ ಜಿಲ್ಲಾ ನಿರ್ದೇಶಕ ಕರ್ಸಪ್ಪ ಮೇಟಿ ಹೇಳಿದರು.
ಶಿರವಾಡದ ಬಂಗಾರಪ್ಪ ನಗರದಲ್ಲಿ ಕಾರ್ಮಿಕ ಇಲಾಖೆಯಿಂದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ಬೀದಿ ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳನ್ನು ಕಸಿಯುವದು ಅಪರಾದವಾಗಿದ್ದು, ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು. ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವವರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಲಾಗುತ್ತದೆ ಎಂದು ಅವರು ಎಚ್ಚರಿಸಿದರು. ಶಿರವಾಡ ಗ್ರಾಮ ಪಂಚಾಯತ ಅಧ್ಯಕ್ಷೆ ಗಂಗಾ ನಾಯ್ಕ ಮಾತನಾಡಿ, ಬಾಲ ಕಾರ್ಮಿಕ ಪದ್ದತಿ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕಿದೆ ಎಂದರು. ಬಂಟದೇವ ಯುವ ಸಂಘದವರು ಜಾಗೃತಿಗಾಗಿ ನಾಟಕ ಪ್ರದರ್ಶಿಸಿದರು.
Leave a Comment