• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿ

September 14, 2017 by Sachin Hegde Leave a Comment

ಕಾರವಾರ: ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿಯಾಗಿದ್ದು ಅದನ್ನು ತಡೆಗಟ್ಟುವದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಬಾಲ್ಯ ವಿವಾಹ ತಡೆಯುವಲ್ಲಿ ವಿವಿಧ ಇಲಾಖೆಗಳ ಸಮಯನ್ವಯತೆ ಮತ್ತು ಸಹಕಾರದ ಬಗ್ಗೆ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್ ಚಂದ್ರಶೇಖರ ನಾಯಕ ಮಾತನಾಡಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಗ್ರಾಮ ಸಭೆಗಳನ್ನು ನಡೆಸಿ ಗ್ರಾಮೀಣ ಜನರಲ್ಲಿ ಅರಿವು ಮೂಡಿಸಲು ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದು ಹೇಳಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಗೋವಿಂದಯ್ಯ ಟಿ. ಉಪನ್ಯಾಸ ನೀಡಿ ನಮ್ಮ ಗ್ರಾಮಾಂತರ ಪ್ರದೇಶಗಳಲ್ಲಿ ಹೆಣ್ಣು ಕುಟುಂಬಕ್ಕೆ ಹೊರೆ ಎಂದು ಭಾವಿಸಿ ಬೇಗನೆ ಮದುವೆ ಮಾಡಿಕೊಡಲಾಗುತ್ತದೆ. ಬಾಲ್ಯ ವಿವಾಹ ಸಾಮಾಜಿಕ ಪಿಡುಗುಗಳಲ್ಲೊಂದಾಗಿದೆ. ಬಾಲ್ಯ ವಿವಾಹ ಅಪರಾಧವೆಂದು ಕಾನೂನು ಜಾರಿಯಲ್ಲಿದ್ದರೂ ಕೂಡಾ ಜನಸಾಮಾನ್ಯರಿಗೆ ಅರಿವು ಇರುವದಿಲ್ಲ. ಜನರಲ್ಲಿ ಕಾನೂನು ಬಗ್ಗೆ ಜಾಗೃತಿ ಇಲ್ಲದಿದ್ದರೆ ಅಂತಹ ಕಾನೂನು ವ್ಯರ್ಥ, ಅಪ್ರಾಪ್ತರಿಗೆ ಮದುವೆ ಮಾಡುವದರಿಂದ ಸಮಸ್ಯೆಗಳೆ ಉಂಟಾಗುತ್ತವೆ. ಹೆಣ್ಣಿರಲಿ, ಗಂಡಿರಲಿ ಒಟ್ಟಿನಲ್ಲಿ ಎಲ್ಲರೂ ಬಾಲ್ಯ ವಿವಾಹ ತಡೆಗಟ್ಟಬೇಕು ಎಂದು ಹೇಳಿದರು.
ಡಿ.ಸಿ.ಐ.ಬಿ.ಯ ಪೋಲೀಸ್ ಇನ್ಸ್‍ಪೆಕ್ಟರ್ ಶರಣ ಗೌಡ ಬಾಲ್ಯ ವಿವಾಹ ತಡೆಯುವಲ್ಲಿ ವಿವಿಧ ಇಲಾಖೆಗಳ ಸಮನ್ವಯತೆ ಮತ್ತು ಸಹಕಾರ ಕುರಿತು ಮಾತನಾಡಿ ಬಾಲ್ಯ ವಿವಾಹವನ್ನು ತಡೆ ಗಟ್ಟುವದು ಕೇವಲ ಪೊಲೀಸ್ ಅಥವಾ ಂಯಾವುದೇ ಒಂದು ಇಲಾಖೆ ಕಾರ್ಯವಲ್ಲ. ಬಾಲ್ಯ ವಿವಾಹವನ್ನು ತಡೆಗಟ್ಟಲು ಗ್ರಾಮ ಪಂಚಾಯತ್ ನಗರಸಭೆ, ತಾಲೂಕು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸುತ್ತವೆ. ಬಾಲ್ಯ ವಿವಾಹ ತಡೆಗಟ್ಟಲು ದೂರು ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವದರಿಂದ ನಿರ್ಭಯದಿಂದ ಸಿಬ್ಬಂಧಿಗಳು ಕಾರ್ಯನಿರ್ವಹಿಸಿ ಎಂದು ಶಿಬಿರಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿದೇಶಕ ರಾಜೇಂದ್ರ ಬೇಕಲ್ ಮಾತನಾಡಿ ಬಾಲ್ಯ ವಿವಾಹ ನಿಷೇದ ಕಾಯಿದೆ 2006ರನ್ನು ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ಜಾರಿಗೊಳಿಸುವದು ನಮ್ಮ ಮುಖ್ಯ ಉದ್ದೇಶವೆಂದು ಹೇಳಿದರು. ಕಾರ್ಯಗಾರದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ, ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆ ಪಧಾಧಿಕಾರಿಗಳು ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Karwar News Tagged With: ಅನಿಷ್ಠ ಪದ್ದತಿ, ಇನ್ನೂ ಅಸ್ತಿತ್ವದಲ್ಲಿರುವ, ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ನಡೆದ ಬಾಲ್ಯ, ನಮ್ಮ ಸಮಾಜದಲ್ಲಿ, ಬಾಲ್ಯ ವಿವಾಹವೂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್, ವಿವಾಹ ತಡೆಯುವಲ್ಲಿ, ವಿವಿಧ ಇಲಾಖೆ, ಸಂಯುಕ್ತಾಶ್ರಯದಲ್ಲಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar