• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತದಾನ

September 24, 2017 by Gaju Gokarna Leave a Comment

ಹೊನ್ನಾವರ:

“ರಕ್ತದಾನ ಮಾಡುವುದರಿಂದ ದಾನಿಯ ಆರೋಗ್ಯ ಉತ್ತಮವಾಗುವ ಜೊತೆಗೆ ಇಂಥ ದಾನದಿಂದ ರಕ್ತದ ಅಗತ್ಯ ಇರುವವರಿಗೆ ಉಪಕಾರ ಮಾಡಿದ ತೃಪ್ತಿ ಸಿಗುತ್ತದೆ’ ಎಂದು ತಾಲೂಕಾ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ ಕಿಣಿ ಹೇಳಿದರು.
ಇಲ್ಲಿನ ಎಸ್.ಡಿ.ಎಂ. ಕಾಲೇಜಿನ ಯೂತ್ ರೆಡ್ ಕ್ರಾಸ್,ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಎನ್.ಎಸ್.ಎಸ್. ಘಟಕಗಳು,ಲಯನ್ಸ್ ಕ್ಲಬ್ ಹಾಗೂ ತಾಲೂಕಾ ಸರ್ಕಾರಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಇಲ್ಲಿ ನಡೆದ ರಕ್ತದಾನ ಮಹತ್ವದ ಕುರಿತ ಜಾಗೃತಿ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು,ರಕ್ತದಾನದ ಬಗೆಗೆ ಇರುವ ತಪ್ಪು ಕಲ್ಪನೆಗೆ ಈ ಕುರಿತ ಅಜ್ಞಾನ ಕಾರಣ’ ಎಂದು ಹೇಳಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಡಿ.ಡಿ.ಮಡಿವಾಳ ಮಾತನಾಡಿ,”ಫಲಾಪೇಕ್ಷೆ ಇಲ್ಲದೆ ಇತರರಿಗೆ ನೀಡುವುದು ದಾನವೆನಿಸಿಕೊಳ್ಳುತ್ತದೆ.ರಕ್ತದಾನ ಶ್ರೇಷ್ಠ ದಾನಗಳಲ್ಲೊಂದು’ಎಂದು ಹೇಳಿದರು.
ತಾಲೂಕು ಆಸ್ಪತ್ರೆಯ ಆಪ್ತ ಸಮಾಲೋಚಕ ವಿನಾಯಕ ಮಾತನಾಡಿ”ಭಾರತದಲ್ಲಿ ಹಲವಾರು ಗರ್ಭಿಣಿ ಸ್ತ್ರೀಯರು,ಮಕ್ಕಳು ಅಗತ್ಯದ ಸಂದರ್ಭದಲ್ಲಿ ರಕ್ತ ಸಿಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.ರಕ್ತ ನೀಡಲು ದಾನಿಗಳು ಮುಂದೆ ಬರಬೇಕು’ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಪ್ರೊ.ಎಸ್.ಎಸ್. ಹೆಗಡೆ ಮಾತನಾಡಿ,”ಸಮಾಜ ಸೇವೆ ಕೇವಲ ಫ್ಯಾಶನ್ ಆಗದೆ ಅದು ನಮ್ಮ ಸ್ವಭಾವವಾಗಬೇಕು’ಎಂದು ಸಲಹೆ ನೀಡಿದರು.
ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರೊ.ಆರ್.ವಿ.ಹೆಗಡೆ ಸ್ವಾಗತಿಸಿದರು.ಪ್ರೊ.ಎಂ.ಜಿ.ಹೆಗಡೆ ನಿರೂಪಿಸಿದರು.ಪ್ರೊ.ಸುರೇಶ ಎಸ್.ವಂದಿಸಿದರು.
ಪ್ರಾಚಾರ್ಯ ಪ್ರೊ.ಎಸ್.ಎಸ್.ಹೆಗಡೆ,ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಸೇರಿದಂತೆ ಅರ್ಹ 26 ಜನರು ಶಿಬಿರದಲ್ಲಿ ರಕ್ತದಾನ ಮಾಡಿದರು.ರಕ್ತನಿಧಿ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರಿಜ್ವಾನ್ ಹಾಗೂ ಕೇಂದ್ರದ ಸಿಬ್ಬಂದಿಗಳು ಅಗತ್ಯ ಸಹಕಾರ ನೀಡಿದರು.

watermarked 23hnr1

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News Tagged With: "ಫಲಾಪೇಕ್ಷೆ, "ಸಮಾಜ ಸೇವೆ ಕೇವಲ ಫ್ಯಾಶನ್, blood donation, honavar, sdm college student, ಅಜ್ಞಾನ ಕಾರಣ, ಅಧ್ಯಕ್ಷ ಡಿ.ಡಿ.ಮಡಿವಾಳ ಮಾತನಾಡಿ, ಎನ್.ಎಸ್.ಎಸ್. ಘಟಕಗಳು, ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿಗಳಿಂದ, ಪ್ರೊ.ಎಸ್.ಎಸ್. ಹೆಗಡೆ ಮಾತನಾಡಿ, ಭಾರತದಲ್ಲಿ ಹಲವಾರು ಗರ್ಭಿಣಿ ಸ್ತ್ರೀಯರು, ಮಕ್ಕಳು, ಮಾಡುವುದರಿಂದ ದಾನಿಯ ಆರೋಗ್ಯ ಉತ್ತಮ, ಯೂತ್ ರೆಡ್ ಕ್ರಾಸ್, ರಕ್ತದಾನ, ಲಯನ್ಸ್ ಕ್ಲಬ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,058 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...