ಕಾರವಾರ:
ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಇದನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್ ಹೇಳಿದರು.
ನಗರದ ಹಿಂದೂ ಹೈಸ್ಕೂಲ್ ಆವರಣದಲ್ಲಿನ ಬಾಲ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಜವಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮುಂದಿದೆ ಎಂದು ಅವರು ಅಭಿಪ್ರಾಯ ಪಟ್ಟರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಪ್ರಮೀಳಾ ನಾಯ್ಕ ಮಾತನಾಡಿ, ಮಕ್ಕಳಿಗೆ ಚಿಕ್ಕವಯಸ್ಸಿನಲ್ಲಿಯೇ ಅವರಿಗೆ ಸೂಕ್ತ ಮಾಹಿತಿ ನೀಡಿ ಅವರಿಗಿಷ್ಟದ ವಿಷಯಗಳಲ್ಲಿ ಪ್ರೋತ್ಸಾಹ ನೀಡಬೇಕು. ಅಂದಾಗ ಮಕ್ಕಳು ತಮ್ಮ ಪ್ರತಿಭೆಗಳನ್ನು ಧೈರ್ಯದಿಂದ ಅನಾವರಣ ಮಾಡಲು ಸಾಧ್ಯವಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಮಾತನಾಡಿ, ಮಕ್ಕಳಲ್ಲಿರುವ ಉತ್ಸಾಹ ಅವರ ಪ್ರತಿಭೆಗಳನ್ನು ಹೊರಹಾಕುತ್ತದೆ. ಇಂತಹ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಪಾಲಕರು ಅವರಿಗೆ ಪ್ರೋತ್ಸಾಹ ನೀಡಬೇಕು. ಕೇವಲ ಮಕ್ಕಳನ್ನು ಪಾಠಕ್ಕೆ ಸಿದ್ದಗೊಳಿಸದೆ ವಿವಿಧ ಕೌಶಲಗಳನ್ನು ಅಳವಡಿಸಿಕೊಳ್ಳಲು ಉತ್ತೇಜ ನೀಡಬೇಕು. ಪ್ರಸ್ತುತ ನಡೆಯುತ್ತಿರುವ ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಸಾಮಥ್ರ್ಯವನ್ನು ಪ್ರತಿಬಿಂಬಿಸಲು ಸಿಕ್ಕ ವೇದಿಕೆ ಇದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.
ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ನಂದಿನಿ ಗುನಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಕೆ. ಪ್ರಕಾಶ, ಬಿಇಓ ರಾಮಕೃಷ್ಣ ನಾಯಕ, ಶ್ರೀಕಾಂತ ಹೆಗಡೆ ಇದ್ದರು.
Leave a Comment