ಕಾರವಾರ:
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಕಾನೂನು ಅರಿವು ಕಾರ್ಯಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಉಪನ್ಯಾಸ ನೀಡಿದರು.
ಕಷ್ಟಗಳನ್ನು ಎದುರಿಸಿ ಮುಂದೆ ಬಂದರೆ ಬದುಕಿನಲ್ಲಿ ಯಶಸ್ಸು ಸಿಗುತ್ತದೆ ಎಂದು ಅವರು ಹೇಳಿದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಉದಯ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು ಎಂದು ಹೇಳಿದರು. ನ್ಯಾಯವಾದಿ ಜಿ.ಎನ್ ಜಾಂಬವಳಿಕರ್, ರಾಜೇಶ್ವರಿ ಕೆ.ವಿ ಇದ್ದರು. ಪ್ರಾಚಾರ್ಯ ವಿ.ಎಂ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದವರು ಕಾರ್ಯಕ್ರಮ ಆಯೋಜಿಸಿದ್ದರು. ದೀಪಕ ತಳ್ಳೇಕರ್ ಸ್ವಾಗತಿಸಿದರು. ಸತೀಶ ಗಾಂವ್ಕರ್ ವಂದಿಸಿದರು.
Leave a Comment