ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗ್ರಾಮೀಣ, ಹಿಂದುಳಿದ, ಅರೆ-ನಗರ, ಕೋಳಗೇರಿ ದುರ್ಬಲ ವರ್ಗದವರನ್ನು ಹೊಂದಿದ ಪ್ರದೇಶಗಳು ಮತ್ತು ಆರೋಗ್ಯ ಸಂಸ್ಥೆಗಳಿಂದ ದೂರ ಇರುವ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನಿಸಿದೆ.
ಪ್ರಥಮ ಆದ್ಯತೆ ನಗರ ಪ್ರದೇಶ, ಅರೆ ನಗರ ಪ್ರದೇಶ, ಮತ್ತು ಗುಡ್ಡಗಾಡು ಪ್ರದೇಶದ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡುವುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ 16 ಇದ್ದು ಆಯಾ ತಾಲೂಕಿನ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಜಿಲ್ಲೆಯ ಒಟ್ಟು ಆಶಾ ಕಾರ್ಯಕರ್ತೆಯರ ಹುದ್ದೆಯ ಅನುಗುಣವಾಗಿ ಆಯ್ಕೆ ಮಾಡಲಾಗುವುದು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಂಪರ್ಕಿಸಲು ಡಿ.ಹೆಚ್.ಒ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment