ಹೊನ್ನಾವರ :
ಗುರುವಾರ ದಿ. 12 ರಂದು ಮುಂಜಾನೆ 10.30 ಗಂಟೆಗೆ ಪಟ್ಟಣದ ನ್ಯೂ ಇಂಗ್ಲೀಷ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.
ಈಗಾಗಲೇ ಹೊನ್ನಾವರ ತಾಲೂಕಿನಾದ್ಯಂತ ಕಳೆದ ದಿÀ : 23 ರಿಂದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಯುತ್ತಿದ್ದು ಈ ಕುರಿತಂತೆ ಪ್ರಗತಿ ಪರಿಶೀಲಿಸಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿ ಪಕ್ಷವನ್ನು ಸದೃಢಗೊಳಿಸಲು ಮತ್ತು ಹಲವು ಸಂಘಟನಾತ್ಮಕ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಎಂ. ಶೆಟ್ಟಿ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡ, ಜಿಲ್ಲಾ ಕಾಂಗ್ರೆಸ್ ವೀಕ್ಷಕ ವಾಮನ ನಾಯ್ಕ ಮಂಕಿ, ಇನ್ನೂ ಹಲವಾರು ಮುಖಂಡರುಗಳು ಹಾಜರಿದ್ದು ಸೂಕ್ತ ಸಲಹೆ, ಸೂಚನೆ ನೀಡಲಿದ್ದಾರೆ ಎಂದು ಜಗದೀಪ ಎನ್. ತೆಂಗೇರಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ
Leave a Comment