ಕಾರವಾರ:
ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿಗಳಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ 2017-18 ನೇ ಸಾಲಿನ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅರ್ಹ ಪರಿಶಿಷ್ಟ ಜಾತಿಯ 21 ಮತ್ತು ಪರಿಶಿಷ್ಟ ಪಂಗಡ 08 ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ರೂ.3,00,000/- ಗಳ ಸಹಾಯಾನುದಾನ ಒದಗಿಸಲಾಗುತ್ತದೆ. ಅರ್ಹರು ದಿನಾಂಕ 08/11/207 ರ ಸಂಜೆ 5ರೊಳಗೆ ಪ್ರವಸೋದ್ಯಮ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಫಲಾನುಭವಿಗಳು ಶೇ.5% ರಷ್ಟನ್ನು ಭರಿಸಿ, ಉಳಿದ ಮೊತ್ತವನ್ನು ಬ್ಯಾಂಕುಗಳ ಮೂಲಕ ಸಾಲ ಒದಗಿಸಲಾಗುವುದು. ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು, 20-40 ವಯೋಮಿತಿಯವರಾಗಿದ್ದು, ಅರ್ಹತೆ, ಅಗತ್ಯ ದಾಖಲೆಗಳು ಮತ್ತು ಷರತ್ತುಗಳ ಅನ್ವಯವಾಗಿ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment