ಹೊನ್ನಾವರ:
ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಸೇಂಟ್ ಆಂಥೊನಿ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ. ಜೊತೆಗೆ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲೂ ಭಾಗವಹಿಸಿ ಪರಿಪೂರ್ಣರಾಗಬೇಕು. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಬೌದ್ಧಿಕ ಸದೃಢತೆ ದೊರೆಯುತ್ತದೆ. ಸೋತವರು ಧೃತಿಗೆಡದೇ ಮುಂದಿನ ದಿನಗಳಲ್ಲಿ ಹೆಚ್ಚು ಪರಿಶ್ರಮ ವಹಿಸಿದರೆ ಜಯ ಲಭಿಸುತ್ತದೆ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಮುಖಂಡ ವಿನೋದ ನಾಯ್ಕ ರಾಯಲ್ಕೇರಿ ಅವರು ಮಾತನಾಡಿ ಮಕ್ಕಳು ಹಿರಿಯರನ್ನು ಗೌರವಿಸುವ ಸಂಸ್ಕøತಿಯನ್ನು ಬೆಳೆಸಿಕೊಳ್ಳಬೇಕು. ಆತ್ಮವಿಶ್ವಾಸ ಹಾಗೂ ಸತತ ಪರಿಶ್ರಮದಿಂದ ಕೈಗೊಂಡ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂದರು.
ಗ್ರಾ ಪಂ ಅಧ್ಯಕ್ಷ ಶ್ರೀಕಾಂತ ಮೊಗೇರ, ರವಿ ಕೆ. ಶೆಟ್ಟಿ, ರಾಜು ಭಂಡಾರಿ, ನಾರಾಯಣ ಹೆಗಡೆ ಮುಗ್ವಾ, ಅರುಣ ಕವರಿ ತೊರ್ಕೆ, ವಿನಾಯಕ ಆಚಾರಿ, ಆನಂದ ಮಾಸ್ತಿಕಟ್ಟೆ, ಎಂ.ಜಿ.ನಾಯ್ಕ, ಸಾಧನಾ ಬರ್ಗಿ, ಮಹೇಶ ಶೆಟ್ಟಿ ಇತರರು ಉಪಸ್ಥಿತರಿದ್ದರು.
Leave a Comment