• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ

October 11, 2017 by Sachin Hegde Leave a Comment

ಹಳಿಯಾಳ ;

ಅತಿಥಿ ಉಪನ್ಯಾಸಕರ ಕೊರತೆಯ ಕಾರಣ ಪಾಠಗಳು(ಸಿಲೆಬಸ್) ಪೂರ್ಣ ಆಗದಿರುವುದರಿಂದ ಕರ್ನಾಟಕ ವಿಶ್ವ ವಿದ್ಯಾಲಯವು ಅಕ್ಟೋಬರ್ ತಿಂಗಳಿನ 23 ರಿಂದ ಆರಂಭಿಸಲು ಉದ್ದೇಶಿಸಿರುವ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಹಳಿಯಾಳದ ಹವಗಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲದಾರ ವಿದ್ಯಾದರ ಗುಳಗುಳಿ ಅವರಿಗೆ ಸಲ್ಲಿಸಿದರು.
ಮಂಗಳವಾರ ಈ ಬಗ್ಗೆ ಸಭೆ ನಡೆಸಿದ ವಿದ್ಯಾರ್ಥಿಗಳು ಮಹಾವಿದ್ಯಾಲಯದಿಂದ ಪ್ರತಿಭಟನಾ ಮೆರವಣಿಗೆಯ ಮೂಲಕ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿರುವ ಮಿನಿವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ ಮಹಾವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಕೊರತೆಯ ಕಾರಣ ಕಳೆದ ಒಂದೂವರೆ ತಿಂಗಳಿನ ಅವಧಿಯಲ್ಲಿ ನಿಗದಿತ ಸಿಲೆಬಸ್ ಮುಗಿಯದೇ ಕೇವಲ ಒಂದೆರಡು ಪಾಠಗಳು ಮಾತ್ರ ಮುಗಿದಿದ್ದು ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ಅಕ್ಟೋಬರ 23 ರಿಂದ ಪದವಿಯ ಪರೀಕ್ಷೆಯನ್ನು ನಡೆಸುವುದಾಗಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಬರೆಯಲು ಅಸಾಧ್ಯವಾಗಿದ್ದು ಇಗಾಗಲೇ ಪ್ರಕಟಿಸಿದ ಪರೀಕ್ಷೆಗಳನ್ನು ನವೆಂಬರ್ 25ರ ನಂತರ ನಡೆಸುವಂತೆ ಒತ್ತಾಯಿಸಲಾಗಿದೆ.
ಕರ್ನಾಟಕ ವಿಶ್ವವಿದ್ಯಾಲಯವು ಸ್ಥಳೀಯ ಕಾಲೇಜಿನ ಪರಿಸ್ಥಿತಿಯನ್ನು ಅವಲೋಕಿಸಿ ಪರೀಕ್ಷೆಗಳನ್ನು ಮುಂದೂಡಲು ಮೀನಮೇಷ ಎಣಿಸಿದರೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಲಕ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಹಾದಿಯನ್ನು ತುಳಿಯಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆಯನ್ನು ನೀಡಲಾಗಿದೆ.
ಮೆರವಣಿಗೆಯ ನೇತೃತ್ವವನ್ನು ವಿದ್ಯಾರ್ಥಿ ಮುಖಂಡರಾದ ರೋಹನ್ ಕಡಬಕಟ್ಟಿ, ವಿಜಯ ಬೂದಪ್ಪನ್ನವರ, ಚೇತನ ಅಷ್ಟೇಕರ, ಕುಮಾರ ಮಿಂಡೋಳ್ಕರ, ಅಪ್ಪಾಸಾಹೇಬ ಹುಂಡೇಕರ, ಅಕ್ಷಯ ಬಾಳೇಕುಂದ್ರಿ, ಸಾಗರ ಕಾಜಗಾರ, ಅಶ್ವಿನ್ ಶೆಟ್ಟಿ, ಅಕ್ಷತಾ ಅಂಗ್ರೋಳ್ಳಿ, ಸೌಮ್ಯ ಅಂಗ್ರೋಳ್ಳಿ, ಶೃತಿ ಹುಲಿಕಟ್ಟಿ ಇತರರು ವಹಿಸಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: ಅಕ್ಷಯ, ಅತಿಥಿ ಉಪನ್ಯಾಸ, ಅಪ್ಪಾಸಾಹೇಬ ಹುಂಡೇಕರ, ಉಗ್ರ ಹೋರಾಟ, ಕಾಲೇಜಿನ, ಪ್ರತಿಭಟನೆ, ಪ್ರಥಮ ದರ್ಜೆ, ಮಿಂಡೋಳ್ಕರ, ಮುಂದೂಡುವಂತೆ ಆಗ್ರಹಿಸಿ, ವಿದ್ಯಾರ್ಥಿಗಳು ಪರೀಕ್ಷೆಗಳನ್ನು, ಸಿಲೆಬಸ್ ಮುಗಿಯ, ಹಳಿಯಾಳದ ಹವಗಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar