ಕಾರವಾರ:
ಸರ್ಕಾರದ ಆದೇಶದಂತೆ ಪ್ರಥಮ ಭಾರಿಗೆ ಅಕ್ಟೋಬರ 23 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವ ಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುವದು. ಕಿತ್ತೂರು ರಾಣಿ ಚೆನ್ನಮ್ಮ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗುವದು ಮತ್ತು ಅಂದು ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿರಬೇಕು ಎಂದು ಹೇಳಿದರು.
Leave a Comment