• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರಕ್ಕೆ ಚಾಲನೆ

October 18, 2017 by Sachin Hegde Leave a Comment

ಕಾರವಾರ:

ಮಿಶನ್ 2025 ಎಂಬುದು ಸಮಗ್ರ ಅಭಿವೃದ್ದಿಯ ನಕಾಶೆ ಸಿದ್ದ ಪಡಿಸುವ ವೇದಿಕೆಯಾಗಿದೆ ಎಂದು ಸಾರ್ವಜನಿಕ ಇಲಾಖೆ ಉದ್ದಿಮೆಗಳ ಪ್ರಧಾನ ಕಾರ್ಯದರ್ಶಿ ರೇಣುಕಾ ಚಿದಂಬರಂ ಹೇಳಿದರು.
ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ನಡೆದ ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ಮೊದಲ ಬಾರಿಗೆ ಜನರಿಂದ ಸಲಹೆ ಪಡೆಯಲು ಸರ್ಕಾರ ಜಿಲ್ಲಾ ಮಟ್ಟದಲ್ಲಿ ಚಿಂತನಾ ಸಭೆ ನಡೆಸುತ್ತಿದೆ. ಎಲ್ಲರನ್ನೂ ಒಗ್ಗೂಡಿಸಿ ಕರೆದೊಯ್ಯುವ ಮಹತ್ವಾಕಾಂಕ್ಷೆಯೊಂದಿಗೆ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಈಗಾಗಲೇ 14 ಜಿಲ್ಲೆಗಳಲ್ಲಿ ಕಾರ್ಯಗಾರ ನಡೆಸಿ, ಅದರ ವರದಿಯನ್ನು ರಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ವಿಶೇಷ ಸಭೆ ನಡೆಸಲಾಗುತ್ತಿದೆ ಎಂದರು. ಪ್ರತಿ ಜಿಲ್ಲೆಯಲ್ಲಿ ಆಗಬೇಕಾದ ಕೆಲಸ, ಜನರ ಸಮಸ್ಯೆಗಳನ್ನು ಅರಿತು ಅದನ್ನು ಬಗೆಹರಿಸುವ ಪ್ರಯತ್ನ ನಡೆಸಲಾಗುತ್ತದೆ. ಸಾಮಾನ್ಯ ನಾಗರಿಕರೇ ಯೋಜನೆಯ ಕೇಂದ್ರವಾಗಿದ್ದು, ತಜ್ಞರಿಂದ ಸಲಹೆ ಪಡೆದು ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಎಸ್.ಎಸ್. ನಕುಲ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ 18 ಲಕ್ಷ ಜನ ಸಂಖ್ಯೆ ಇದ್ದರೂ 12 ತಾಲೂಕುಗಳಲ್ಲಿ ಹಂಚಿ ಹೋಗಿದ್ದಾರೆ. ಹೀಗಾಗಿ ಸರ್ಕಾರ ಜನಸಂಖ್ಯೆ ಆಧಾರಿತವಾಗಿ ಬಿಡುಗಡೆ ಮಾಡುವ ಅನುಧಾನ ಈ ಜಿಲ್ಲೆಗೆ ಸಾಲುತ್ತಿಲ್ಲ. ಕರಾವಳಿ ಹಾಗೂ ಮಲೆನಾಡನ್ನು ಹೊಂದಿರುವ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಅವಷ್ಯಕತೆ ಇದೆ ಎಂದು ಮನವರಿಕೆ ಮಾಡಿದರು. ಜಿಲ್ಲೆಯ ಉತ್ಪನ್ನಗಳನ್ನು ಹೊರ ಪ್ರಪಂಚಕ್ಕೆ ಪರಿಚಯಿಸಲು “ಪ್ರೊಡೆಕ್ಟ ಆಫ್ ಉತ್ತರ ಕನ್ನಡ” ಎಂಬ ಹೆಸರಿನಲ್ಲಿ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲೆಯ ಅಪ್ಪೆಮಿಟಿ, ಜೇನುತುಪ್ಪ ಮೊದಲಾದ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಮಾರಾಟವನ್ನು ಇಲ್ಲಿ ನಡೆಸುವದರ ಮೂಲಕ ಜನರ ಏಳಿಗೆಗೆ ಜಿಲ್ಲಾಡಳಿತ ಶ್ರಮಿಸಲಿದೆ ಎಂದರು.
ಸಭಾ ಕಾರ್ಯಕ್ರಮದ ನಂತರ ವಿವಿಧ ಗುಂಪುಗಳನ್ನು ರಚಿಸಿಕೊಂಡು ಚರ್ಚೆ ನಡೆಸಲಾಯಿತು. ಪ್ರಮುಖ ಐದು ವಿಷಯಗಳ ಕುರಿತು ತಜ್ಞರು ವಿಷಯ ಮಂಡಿಸಿದರು. ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರಿ ಮೋಗೇರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯ್ಕ, ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಇತರರು ಇದ್ದರು. ಸುರೇಶ ಶಟ್ಟಿ ನಿರ್ವಹಿಸಿದರು

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Karwar News Tagged With: 2025, ಉತ್ತರ ಕನ್ನಡ ಜಿಲ್ಲೆ, ಕರ್ನಾಟಕ ಮಿಶನ್, ಕಾರ್ಯಗಾರ, ಕಾರ್ಯಗಾರಕ್ಕೆ, ಚಾಲನೆ, ಜಿಲ್ಲಾ, ನಕಾಶೆ, ಮಹತ್ವಾಕಾಂಕ್ಷೆಯೊಂದಿಗೆ, ರೇಣುಕಾ ಚಿದಂಬರಂ, ವಿನುತನ ನವ, ಸಮಗ್ರ ಅಭಿವೃದ್ದಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar