ಹಳಿಯಾಳ:- ವಿ.ಆರ್.ಡಿಎಮ್ ಟ್ರಸ್ಟ್ , ರಾಜ್ಯ ಸರ್ಕಾರ ಹಾಗೂ ವಿವಿಧ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಪ್ರಯತ್ನದಿಂದ ಹುಳೆತ್ತಿ ಸಂಪೂರ್ಣ ನವೀಕರಣಗೊಂಡಿರುವ ಪಟ್ಟಣದ ಅಂಚಿನಲ್ಲಿರುವ ಹವಗಿ ಕೆರೆ ತುಂಬಿದ್ದು ಸಚಿವ ಆರ್.ವಿ.ದೇಶಪಾಂಡೆ ಅವರು ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೆರೆಗೆ ಆಗಮಿಸಿ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ,ತಾಪಂ ಅಧ್ಯಕ್ಷೆ ರೀಟಾ ಸಿದ್ದಿ, ಪುರಸಭೆ ಅಧ್ಯಕ್ಷ ಉಮೇಶ ಬೋಳಶೆಟ್ಟಿ, ತಹಶೀಲದಾರ ವಿದ್ಯಾಧರ ಗುಳಗುಳಿ, ಜಿಪಂ ಸದಸ್ಯರಾದ ಕೃಷ್ಣಾ ಪಾಟೀಲ್, ಲಕ್ಷ್ಮೀ ಕೋರ್ವೆಕರ, ಬ್ಲಾಕ್ ಅಧ್ಯಕ್ಷ ಸುಭಾಶ ಕೋರ್ವೆಕರ, ತಾಪಂ ಅಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ, ಮುಖ್ಯಾಧಿಕಾರಿ ಕೇಶವ ಚೌಗುಲೆ ಇತರರು ಇದ್ದರು.
Leave a Comment