• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭವ್ಯ ಸಂಸ್ಕøತಿ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಕೆಲಸ , ಸಚಿವ ಆರ್.ವಿ.ದೇಶಪಾಂಡೆ

October 22, 2017 by Sachin Hegde Leave a Comment

ಹಳಿಯಾಳ: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯ ಕುರಿತು ಬಿಜೆಪಿ ಪಕ್ಷದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ ಸೇರಿದಂತೆ ಇತರ ಬಿಜೆಪಿ ಮುಖಂಡರು ನೀಡುತ್ತಿರುವ ಹೇಳಿಕೆಗಳನ್ನು ನಾನು ತೀವೃವಾಗಿ ಖಂಡಿಸುತ್ತೇನೆ ಇವರ ಹೇಳಿಕೆಗಳನ್ನು ಗಮನಿಸಿದರೇ ಇವರಿಗೆ ಕೋಮುಸೌಹಾರ್ದತೆ ಮೇಲೆ ವಿಶ್ವಾಸವಿಲ್ಲ ಎಂಬುದು ಸಾಬಿತಾಗುತ್ತದೆ ಜನತೆ ಇದನ್ನು ಅರಿಯಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಪಟ್ಟಣದ ರುಡಸೆಟ್ ಸಭಾಂಗಣದಲ್ಲಿ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಾಷ್ಟ್ರದ ಪ್ರತಿಯೊಬ್ಬ ಪ್ರಜೆ ಕೊಮು ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕು ಅಲ್ಲದೇ ಎಲ್ಲ ವರ್ಗ, ಧರ್ಮದವರು ಒಂದೆ ತಾಯಿಯ ಮಕ್ಕಳಂತೆ ಬಾಳಬೇಕು ಎಂದು ಹೇಳಿದ ದೇಶಪಾಂಡೆ ಕೆಲವರು ಇಲ್ಲ ಸಲ್ಲದ ಕೆಳಮಟ್ಟದ ರಾಜಕಾರಣ ಮಾಡಲು ನಮ್ಮ ಭವ್ಯ ಸಂಸ್ಕøತಿ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿರುವುದು ಖೇದಕರ ಎಂದರು.
ಮಾಜಿ ಸಿಎಂ ಯಡ್ಯೂರಪ್ಪ ಅವರು ಈ ಹಿಂದೆ ಕೆಜೆಪಿಯಲ್ಲಿದ್ದಾಗ ಟಿಪ್ಪು ಅವರನ್ನು ಕೊಂಡಾಡಿದ್ದರೂ ಅಲ್ಲದೇ ಟಿಪ್ಪು ಜಯಂತಿಯ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರನ್ನು ತಲೆಯ ಮೇಲೆ ಹೊತ್ತು ಸುತ್ತಾಡಿದವರು ಇಂದು ಟಿಪ್ಪು ಸುಲ್ತಾನ ಬಗ್ಗೆ ಹಾಗೂ ಜಯಂತಿ ಆಚರಣೆಯ ಬಗ್ಗೆ ಹೇಳುತ್ತಿರುವ ಅಸಂಬದ್ದ ಹೇಳಿಕೆಗಳು ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ಬೆಳವಣಿಗೆಯಲ್ಲ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದ ಪ್ರಹ್ಲಾದ ಜೋಶಿ ಇನ್ನಿತರ ಬಿಜೆಪಿ ಮುಖಂಡರು ಮುಂದಿನ ವರ್ಷದಿಂದ ಟಿಪ್ಪು ಜಯಂತಿ ಆಗಲ್ಲ ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದವಾಗಿದ್ದು ಟಿಪ್ಪು ಜಯಂತಿ ನಡೆಯುವುದಿಲ್ಲ ಎನ್ನಲು ಇವರ್ಯಾರು, ಇವರು ಯಾವ ಭ್ರಮೆಯಲ್ಲಿದ್ದಾರೆ ? ಕರ್ನಾಟಕದ ಸದ್ಯದ ಪರಿಸ್ಥಿತಿ ಬಿಜೆಪಿಗರಿಗೆ ತಿಳಿದಿಲ್ಲ ಎನಿಸುತ್ತದೆ ಕಾಂಗ್ರೇಸ್‍ನ ಕ್ಷೀಪ್ರ ಅಭಿವೃದ್ದಿ ಕಾರ್ಯಗಳ ಪರಿಣಾಮ ಯಾವುದೇ ಕ್ಷಣದಲ್ಲೂ ಚುನಾವಣೆ ನಡೆದರೂ ಕಾಂಗ್ರೇಸ್ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂದರು.
ದಿ.23 ರಂದು ಧಾರವಾಡ ಕೃಷಿ ವಿವಿ ಆವರಣದಲ್ಲಿ ಬೆಳಗಾವಿ ವಿಭಾಗದ 7 ಜಿಲ್ಲೆಗಳ ಸಾಧನಾ ಸಮಾವೇಶ ನಡೆಯುತ್ತಿದ್ದು ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉಧ್ಘಾಟಿಸಲಿದ್ದು ಕಾಂಗ್ರೇಸ್ ಪಕ್ಷದ ನಾಲ್ಕೂವರೆ ವರ್ಷದ ಸಾಧನೆಗಳನ್ನು ಕಾರ್ಯಕ್ರಮದಲ್ಲಿ ವಿವರಿಸಲಾಗುವುದು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಹಾಗೂ ಭರವಸೆಗಳನ್ನು ಈಡೇರಿಸುವ ಸರ್ಕಾರ ರಾಜ್ಯದ ಕಾಂಗ್ರೇಸ್ ಸರ್ಕಾರವಾಗಿದ್ದು ಸರ್ಕಾರ ಮಾಡಿದ ಅಭಿವೃದ್ದಿ ಕಾರ್ಯಗಳಿಗೆ ಲೆಕ್ಕವಿಲ್ಲ ಉಳಿದ ಅವಧಿಯಲ್ಲೂ ಸಾಕಷ್ಟು ಅಭಿವೃದ್ದಿಗಳನ್ನು ಮಾಡಿ ರಾಷ್ಟ್ರಮಟ್ಟದಲ್ಲೇ ಮಾದರಿ ರಾಜ್ಯವಾಗಿ ಮಾಡಲಾಗುವುದು ಎಂದು ಭರವಸೆ ನೀಡಿದ ಅವರು ಧಾರವಾಡದಲ್ಲಿ ನಡೆಯುತ್ತಿರುವ ಸಮಾವೇಶ ಐತಿಹಾಸಿಕ ಸಮಾವೇಶವಾಗಲಿದೆ ಎಂದರು.
ಸುದ್ದಿಗೊಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ, ಜಿಲ್ಲಾ ವಕ್ಪಬೊರ್ಡ ಅಧ್ಯಕ್ಷ ಖಯ್ಯಾಮ ಮುಗದ ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: ಕೇಂದ್ರ, ಟಿಪ್ಪು ಜಯಂತಿ ಆಚರಣೆ, ತರುವಂತಹ ಕೆಲಸ, ಪರಂಪರೆಗೆ ಧಕ್ಕೆ, ಬಿಎಸ್ ಯಡ್ಯೂರಪ್ಪ, ಬಿಜೆಪಿ ಪಕ್ಷದ, ಭವ್ಯ ಸಂಸ್ಕøತಿ, ಮತ್ತು, ಮಾಜಿ ಮುಖ್ಯಮಂತ್ರಿ, ರಾಜ್ಯದಲ್ಲಿ, ಸಚಿವ ಅನಂತಕುಮಾರ ಹೆಗಡೆ, ಸಚಿವ ಆರ್.ವಿ.ದೇಶಪಾಂಡೆ, ಸಂಸದ ಪ್ರಹ್ಲಾದ ಜೋಶಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar