ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಾರ್ಯಾಲಯ, ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ ಅ.28 ರಂದು ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಆರ್.ವ್ಹಿ ದೇಶಪಾಂಡೆ ಕ್ರೀಡಾಕೂಟ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯ ರಾಜ್ಯ ಸಚಿವ ಅನಂತಕುಮಾರ ಹೆಗಡೆ, ಮುಖ್ಯ ಅಥಿತಿಗಳಾಗಿ ಭಾಗವಹಿಸುವರು. ಶಾಸಕ ಸತೀಶ ಕೆ. ಸೈಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕುಮಟಾ-ಹೊನ್ನಾವರ ಶಾಸಕಿ ಶಾರದಾ ಮೋಹನ ಶೆಟ್ಟಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೊಗೇರ, ಶಿರಸಿ-ಸಿದ್ದಾಪೂರ ಶಾಸಕ ವಿಶ್ವೇಶ್ವರ ಕಾಗೇರಿ, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ವಿಧಾನ ಪರಿಷತ್ ಸದಸ್ಯರು ಬಸವರಾಜ ಹೊರಟ್ಟಿ, ಭಟ್ಕಳ ಶಾಸಕ ಮಂಕಾಳ ವೈದ್ಯ ಹಾಗೂ ಇನ್ನಿತರ ಗಣ್ಯರು ಭಾಗವಹಿಸುವರು.
Leave a Comment