ಕಾರವಾರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ 1 ರಂದು ಬೆಳಿಗ್ಗೆ 8 ಗಂಟೆಗೆ ಕಾರವಾರ ಮಿನಿ ವಿಧಾನ ಸೌದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕನ್ನಡಾಂಬೆಯ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆ ಚಾಲನೆ ನೀಡುವರು.
ಬೆಳಗ್ಗೆ 9 ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ನಂತರ ಪಥ ಸಂಚಲನ, ವಂದನೆ ಸ್ವೀಕಾರ, ರಾಜ್ಯೋತ್ಸವ ಸಂದೇಶ ಹಾಗೂ ವಿವಿಧ ಸಾಂಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಯಂಕಾಲ 5-30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಾಲಾ ಮಕ್ಕಳ ಮನರಂಜನಾ ಕಾರ್ಯಕ್ರಮಗಳು, ಹಾಗೂ ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.
ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯ ರಾಜ್ಯ ಸಚಿವ ಅನಂತಕುಮಾರ ಹೆಗಡೆ, ಜಿಲ್ಲಾ ಪಂಚಾಯತ್ ಅದ್ಯಕ್ಷೆ ಜಯಶ್ರೀ ಮೋಗೇರ ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
Leave a Comment