• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅನಧಿಕೃತ ಮರ ಕಟಾವು – ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವಿರುದ್ದ ಗರಂ ಆದ ಅಧ್ಯಕ್ಷ

November 1, 2017 by Sachin Hegde Leave a Comment

ಕಾರವಾರ: ನಗರದ ವಿವಿಧ ವಾರ್ಡಗಳಲ್ಲಿ ನಡೆಯುವ ಅಭಿವೃದ್ದಿ ಕೆಲಸಗಳ ಕುರಿತು ಅಧಿಕಾರಿಗಳು ಸ್ಥಳೀಯ ಸದಸ್ಯರಿಗೆ ಸೂಕ್ತ ಮಾಹಿತಿ ಒದಗಿಸಬೇಕು ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಸೂಚಿಸಿದರು.
ಮಂಗಳವಾರ ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಅವರು, ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದರು.
ನಗರದ ಜನತಾ ಬಜಾರ್ ಮುಂಭಾಗ ಮರವೊಂದನ್ನು ಕಡಿಯಲಾಗಿದೆ. ಇದರಿಂದ ನಗರದ ಸೌಂದರ್ಯಕ್ಕೆ ದಕ್ಕೆ ಉಂಟಾಗಿದೆ. ರಸ್ತೆ ಅಗಲೀಕರಣದ ವೇಳೆ ಮರ ಕಟಾವಿಗೆ ವಿರೋಧ ವ್ಯಕ್ತಪಡಿಸಿದ್ದ ಪರಿಸರವಾದಿಗಳು ಈಗ ಸುಮ್ಮನಿದ್ದಾರೆ. ಮರ ಕಡಿತ ನಂತರ ಕಟ್ಟಿಗೆ ಸಾಗಾಟದ ಬಗ್ಗೆಯೂ ಅನುಮಾನಗಳಿವೆ. ಮರ ಕಟಾವಿನ ಕುರಿತು ನಗರಸಭೆ ಅಧಿಕಾರಿಗಳು ಜನಪ್ರತಿನಿಧಿಗಳ ಗಮನಕ್ಕೆ ತಂದಿಲ್ಲ ಎಂದು ಸದಸ್ಯ ಗಣಪತಿ ಉಳ್ವೇಕರ್ ಆರೋಪಿಸಿದರು. ಇದಲ್ಲದೇ ವಿವಿಧ ಕಾಮಗಾರಿಗಳ ಅನುಷ್ಟಾನದ ವೇಳೆಯಲ್ಲಿಯೂ ಸದಸ್ಯರಿಗೆ ಅಧಿಕಾರಿಗಳು ಸೂಕ್ತ ಮಾಹಿತಿ ನೀಡುತ್ತಿಲ್ಲ ಎಂದು ಕೆಲ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದರು. ಈ ವೇಳೆ ನಗರಸಭೆಯಲ್ಲಿ ನಡೆಸಲಾಗುವ ಎಲ್ಲಾ ಚಟುವಟಿಕೆಗಳ ಕುರಿತು ಸದಸ್ಯರಿಗೆ ಸೂಕ್ತ ಮಾಹಿತಿ ಒದಗಿಸುವಂತೆ ಅಧ್ಯಕ್ಷರು ತಾಕೀತು ಮಾಡಿದರು.
ನಗರದಲ್ಲಿ ನಡೆಯುವ ಜಾತ್ರಾ ಮಹೋತ್ಸವಗಳಿಗೆ ಬೆಳಕಿನ ತೊಂದರೆಯಾಗುತ್ತಿದೆ ಎಂದು ಸದಸ್ಯರು ಅಸಮಧಾನ ವ್ಯಕ್ತಪಡಿಸಿದರು. ನಗರಸಭೆ ಬಳಿ ಪ್ಲೆಡ್‍ಲೈಟ್‍ಗಳಿದ್ದು ಅದನ್ನು ವಿಶೇಷ ಹಬ್ಬ ಹರಿದಿನ ಹಾಗೂ ಜಾತ್ರಾ ಮಹೋತ್ಸವಗಳಲ್ಲಿ ಅಳವಡಿಸಬೇಕು ಎಂದು ಆಗ್ರಹಿಸಿದರು. ಸದಸ್ಯ ರಮೇಶ್ ಗೌಡ ಮಾತನಾಡಿ, ನಗರಸಭೆ ವ್ಯಾಪ್ತಿಗೆ ಬರುವ ಗುಡ್ಡಳ್ಳಿ ಇನ್ನು ಹಿಂದೂಳಿದ ಪ್ರದೇಶವಾಗಿದೆ. ಈ ಗ್ರಾಮದಲ್ಲಿ ವಿದ್ಯುತ್ ಇಲ್ಲ. ನಗರಸಭೆಗೆ ಮನವಿ ಸಲ್ಲಿಸಿದ ನಂತರ ಗುಡ್ಡಳ್ಳಿಗೆ ಕೆಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಜಿಲ್ಲಾಡಳಿತ ಹಾಗೂ ನಗರಸಭೆ ಸಹಕಾರದಲ್ಲಿ ಶೌಚಾಲಯ, ಕುಡಿಯುವ ನೀರು ಹಾಗೂ ರಸ್ತೆ ನಿರ್ಮಾಣ ಕೆಲಸ ಮಾಡಲಾಗುತ್ತಿದೆ. ಹೀಗಿದ್ದರೂ ಕೆಲವರು ನಗರಸಭೆ ವಿರುದ್ದ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಗುಡ್ಡಳ್ಳಿ ಗ್ರಾಮದ ಜನತೆಗೆ ಬೆಳಕಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಇನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಬಂದ ಅನುಧಾನ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು. ಹಗಲಿನಲ್ಲಿಯೂ ಬೀದಿ ದೀಪ ಉರಿಯುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬೀದಿ ದೀಪ ನಿರ್ವಹಣಾ ಸಮಿತಿ ನಿರ್ಲಕ್ಷ ವಹಿಸಿದವರಿಗೆ 10ಸಾವಿರ ದಂಡ ವಿಧಿಸಿರುವದಾಗಿ ಪೌರಾಯುಕ್ತ ಯೋಗೇಶ್ವರ ಸಭೆಗೆ ತಿಳಿಸಿದರು. ಉಪಾಧ್ಯಕ್ಷೆ ಲೀಲಾಬಾಯಿ ಠಾಣೆಕರ್ ಹಾಗೂ ಇತರೆ ಸದಸ್ಯರು ಸಭೆಯಲ್ಲಿದ್ದರು

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Karwar News Tagged With: ಅಧಿಕಾರಿಗಳ ವಿರುದ್ದ, ಅನಧಿಕೃತ ಮರ ಕಟಾವು, ಗಣಪತಿ ಉಳ್ವೇಕರ್ ಆರೋಪಿಸಿದರು, ಗರಂ ಆದ ಅಧ್ಯಕ್ಷ, ನಗರಸಭೆ, ಬಜಾರ್ ಮುಂಭಾಗ, ವಿವಿಧ ವಾರ್ಡ, ಸಾಮಾನ್ಯ ಸಭೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,058 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar