• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ

November 1, 2017 by Sachin Hegde Leave a Comment

ಕಾರವಾರ: ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ” ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಮಂಗಳವಾರ ಸಂಜೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ನಡೆಸಿದ ಸಭೆಯಲ್ಲಿ ಕರಾವಳಿ ಉತ್ಸವದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕರಾವಳಿ ಉತ್ಸವ ಹಾಗೂ ಉತ್ಸವದ ಅಂಗವಾಗಿ ನಡೆಸಬೇಕಾದ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದರು. ನಂತರ ಡಿಸೆಂಬರ್ 8, 9, 10ರಂದು ಉತ್ಸವ ಆಯೋಜಿಸುವ ಕುರಿತು ಘೋಷಿಸಿದರು. ಈ ಬಾರೀ ಕಾರವಾರ, ಹಳಿಯಾಳ ಹಾಗೂ ಹೊನ್ನಾವರದಲ್ಲಿ ಉತ್ಸವ ನಡೆಯಲಿದೆ ಎಂದು ತಿಳಿಸಿದರು. ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಬೇಕು. ಅಂತರಾಷ್ಟ್ರೀಯ ಕಲಾವಿದರನ್ನು ಕರೆಯಿಸಬೇಕು. ಜೊತೆಗೆ ಜನರ ಸಹಭಾಗಿತ್ವದಲ್ಲಿ ಉತ್ಸವಗಳನ್ನು ನಡೆಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

* ಸ್ಕೂಬಾ ಡೈವಿಂಗ್ ಉತ್ಸವ
ಭಟ್ಕಳ ಸಮೀಪದ ಮುರ್ಡೇಶ್ವರ ನೇತ್ರಾಣಿಯಲ್ಲಿ ಸ್ಕೂಬಾ ಡೈವಿಂಗ್ ಉತ್ಸವ ನಡೆಸುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು. ಜನವರಿ 6 ಮತ್ತು 7ರಂದು ಎರಡು ದಿನಗಳ ಕಾಲ ಸ್ಕೂಬಾ ಡೈವಿಂಗ್ ಉತ್ಸವ ನಡೆಸುವ ಬಗ್ಗೆ ಚರ್ಚೆ ನಡೆಯಿತು. ಪ್ರವಾಸೋಧ್ಯಮ ಬೆಳವಣಿಗೆಗೆ ಪೂರಕವಾಗಿ ಈ ಉತ್ಸವ ನಡೆಸುವಂತೆ ಸಚಿವರು ಸೂಚಿಸಿದರು. ಅಂತರಾಷ್ಟ್ರೀಯ ಹಾಗೂ ಪರಿಣಿತ ಸ್ಕೂಬಾ ಡೈವಿಂಗ್ ತಂಡವನ್ನು ಉತ್ಸವಕ್ಕೆ ಆಮಂತ್ರಿಸುವಂತೆ ಸಲಹೆ ನೀಡಿದರು.

* ವೈನ್ ಫೆಸ್ಟಿವಲ್
ಕಾರವಾರದ ಕಾಳಿ ಸಂಗಮದಲ್ಲಿ ನವೆಂಬರ್ 24ರಿಂದ 26ರ ವರೆಗೆ ದ್ರಾಕ್ಷಾರಸ ಉತ್ಸವ ನಡೆಯಲಿದೆ. ತೋಟಗಾರಿಕಾ ಇಲಾಖೆ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತವೂ ಕಾಳಿ ರಿವರ್ ಗಾರ್ಡನ್‍ನಲ್ಲಿ ಈ ಉತ್ಸವ ನಡೆಸಲಿದೆ. ಶೇ. 10ರ ರಿಯಾಯತಿ ದರದಲ್ಲಿ ವೈನ್‍ಗಳ ಮಾರಾಟ ನಡೆಸಲು ನಿರ್ಧರಿಸಲಾಗಿದೆ. 20ರೂ ಪ್ರವೇಶ ಶುಲ್ಕ ಇರಿಸಲಾಗಿದ್ದು, 21 ವರ್ಷ ಮೇಲ್ಪಟ್ಟವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

* ಹಾರ್ನಬಿಲ್ ಉತ್ಸವ
ಪಕ್ಷಿ ವೀಕ್ಷಣೆಗೆ ಅನುಕೂಲವಾಗಿರುವ ದಾಂಡೇಲಿಯಲ್ಲಿ ಹಾರ್ನಬಿಲ್ ಉತ್ಸವ ನಡೆಸಲು ಜಿಲ್ಲಾಡಳಿತ ಸಿದ್ದತೆ ನಡೆಸಿದೆ. ಜನವರಿ 27 ಹಾಗೂ 28ರಂದು ಈ ಉತ್ಸವ ನಡೆಯುವ ಸಾಧ್ಯತೆ ಇದ್ದು, ಈ ಬಗ್ಗೆಯೂ ಸಚಿವರು ಚರ್ಚೆ ನಡೆಸಿದರು. ಪಕ್ಷಿತಜ್ಞರಿಂದ ಸರ್ವೆ ನಡೆಸುವ ಕುರಿತು ಸಲಹೆಗಳು ಬಂದವು. ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ, ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಇತರರು ಸಭೆಯಲ್ಲಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Karwar News Tagged With: 10ರ ವರೆಗೆ, ಅಂಗವಾಗಿ, ಉತ್ತರ ಕನ್ನಡ, ಉತ್ಸವದ, ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಕರಾವಳಿ ಉತ್ಸವ, ಚಟುವಟಿಕೆ, ಜಿಲ್ಲಾ, ಡಿಸೆಂಬರ್ 8, ನಡೆಸಬೇಕಾದ, ಮುರ್ಡೇಶ್ವರ ನೇತ್ರಾಣಿಯಲ್ಲಿ, ರಿಂದ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,058 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar