ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಕೌಶಲ್ಯ ತರಬೇತಿ ಯೋಜನೆಯಡಿ ಹಿಂದುಳಿದ ವರ್ಗಗಳಲ್ಲಿ ಬರುವ ವರ್ಗ-1, 2ಎ ವರ್ಗಗಕ್ಕೆ ಸೇರಿರುವ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
ಕೌಶಲ್ಯ ತರಬೇತಿ ಯೋಜನೆಯಡಿ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ ಸಂಸ್ಥೆಯ ಮೂಲಕ ಆಯಾ ತಾಲೂಕಾ ಕೇಂದ್ರಗಳಲ್ಲಿ ಉಚಿತವಾಗಿ ತರಬೇತಿ ನೀಡಲಾಗುವದು. ಅರ್ಜಿ ಸಲ್ಲಿಸಲು ಡಿಸೆಂಬರ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಬಯಸುವರು 18ರಿಂದ 35 ರೊಳಗಿನ ವಯೋಮಿತಿಯವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ 40,000/- ಕ್ಕಿಂತ ಕಡಿಮೆ ಇರಬೇಕು ಮತ್ತು ತಮ್ಮ ಕೈ ಬರಹ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ/ ಪಿ.ಯು.ಸಿ ಅಂಕಪಟ್ಟಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಶಾಲಾ ಟಿ.ಸಿಯೊಂದಿಗೆ ಜಿಲ್ಲಾ ವ್ಯವಸ್ಥಾಪಕರು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ವಾಸಿಂ ಮಂಜಿಲ್, ಹೈ ಚರ್ಚ ಹತ್ತಿರ, ಕಾರವಾರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08382-223229ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
Leave a Comment