ಕಾರವಾರ: ಟಿಪ್ಪು ಜಯಂತಿ ಆಮಂತ್ರಣ ಪದ್ರಿಕೆ ಮುದ್ರಣವಾದ ನಂತರ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸದಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಹೀಗಾಗಿ ಕೊನೆಗಳಿಗೆಯಲ್ಲಿ ಇನ್ನೊಂದು ಆಮಂತ್ರಣ ಪತ್ರಿಕೆಯನ್ನು ಜಿಲ್ಲಾಡಳಿತ ಮುದ್ರಿಸಿದೆ.
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಬರೆಯದಂತೆ ಸೂಚಿಸಿದ್ದರು. ರಾಜ್ಯ ಸರ್ಕಾರದಿಂದ ಬರುವ ನಿರ್ದೇಶನಕ್ಕಾಗಿ ಕಾದ ಉತ್ತರ ಕನ್ನಡ ಜಿಲ್ಲಾಡಳಿತ ಸರ್ಕಾರದ ನಿರ್ದೇಶನದ ಮೇರೆಗೆ ಬುಧವಾರ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿತು. ಅದಾದ ನಂತರ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲಾಡಳಿತಕ್ಕೆ ತಮ್ಮ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸದಂತೆ ಸೂಚನೆ ನೀಡಿದರು. ಹೀಗಾಗಿ ಜಿಲ್ಲಾಡಳಿತ ಇನ್ನೊಮ್ಮೆ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿದೆ. ಇದರಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಅನಂತಕುಮಾರ ಹೆಗಡೆ ಹೆಸರನ್ನು ಕೈ ಬಿಡಲಾಗಿದೆ. ಟಿಪ್ಪು ಜಯಂತಿ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನ. 9 ಹಾಗೂ 10ರಂದು ಮೆರವಣಿಗೆ ಹಾಗೂ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.
Leave a Comment