• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು; ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್

November 10, 2017 by Sachin Hegde Leave a Comment

ಕಾರವಾರ: ವಿದ್ಯಾರ್ಥಿ ಜೀವನದಿಂದಲೇ ಕಾನೂನಿನ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್ ಹೇಳಿದರು.
ದಶದಿನದ ಕಾನೂನು ಸೇವೆಗಳ ಅಭಿನಾಯದ ಮೊದಲೇ ದಿನದ ಕಾರ್ಯಕ್ರಮಗಳನ್ನು ಸೇಂಟ್ ಮೈಕೆಲ್ ಕಾನ್ವೆಂಟ್ ಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಕಿರಿಯ ವಯಸ್ಸಿನಿಂದಲೇ ಕಾನೂನಿನ ಕುರಿತು ತಿಳುವಳಿಕೆ ಹೊಂದುವುದು ಅವಶ್ಯಕ. ಅದರಿಂದ ಕಾನೂನು ಬಾಹಿರ ಚಟುವಟಿಕೆಗಳು ಕಡಿಮೆಯಾಗುತ್ತದೆ ಎಂದರು. ಯಾವುದೇ ರೀತಿಯ ಕಾನೂನು ಸಲಹೆಗಳಿಗೆ ಅಥವಾ ಪರಿಹಾರಕ್ಕಾಗಿ ನ್ಯಾಯಾಲಯದ ಆವರಣದಲ್ಲಿರುವ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಕೆಲವು ಪ್ರಕರಣಗಳಲ್ಲಿ ಇಲ್ಲಿ ಉಚಿತವಾಗಿ ವಕೀಲರನ್ನು ನೇಮಿಸಿ, ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಸಹಕರಿಸಲಾಗುತ್ತದೆ. ಇದರ ಸದುಪಯೋಗ ಎಲ್ಲರೂ?ಪಡೆಯುವಂತಾಗಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉದಯ ನಾಯ್ಕ ಮಾತನಾಡಿ, ಚಿಕ್ಕ ವಯಸ್ಸಿನಲ್ಲಿ ಕಲಿಯುವಲ್ಲಿ, ಕೆಲವು ಅಗತ್ಯ ವಿಷಯಗಳನ್ನು ಅರಿತುಕೊಳ್ಳುವಲ್ಲಿ ವಿದ್ಯಾರ್ಥಿಗಳು ಗಮನ ಹರಿಸಬೇಕು. ಅದನ್ನು ಬಿಟ್ಟು ಉಪಯೋಗವಿಲ್ಲದ ಇತರ ಬಾಹ್ಯ ಚಟುವಟಿಕೆಗಳಿಂದ ದೂರ ಇರಬೇಕು. ಯಾವುದೇ ಸಾಧನೆ ಮಾಡುವಾಗಲೂ ಅದರ ಜತೆ ಕಷ್ಟ ನಷ್ಟಗಳು ಇರುತ್ತದೆ. ಅದನ್ನು ಅನುಭವಿಸಿಕೊಂಡು, ಪರಿಶ್ರಮದಿಂದ ಗುರಿ ಮುಟ್ಟಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ಕಾನೂನು ಸೇವೆಗಳ ದಿನಾಚರಣೆಯ ಮಹತ್ವ ಮತ್ತು ಕಾನೂನು ಸೇವೆಗಳ?ಪ್ರಾಧಿಕಾರದ ಧ್ಯೇಯೋದ್ದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ದೇಶದಲ್ಲಿ ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕವಾಗಿ ಹಾಗೂ ಇತರೆ ವಿಧಾನಗಳಲ್ಲಿ ಶೋಷಣೆಗಳು ಆಗುತ್ತಿವೆ. ಹೀಗಾಗಿ ಮೊದಲು ಅವರನ್ನು ಜಾಗೃತಗೊಳಿಸುವ ಅವಶ್ಯಕತೆ ಇದೆ. ಕಾನೂನಿನ ಅರಿವನ್ನು ಅವರಿಗೆ ನೀಡುವ ಮೂಲಕ ಅವರನ್ನು ಜಾಗೃತಗೊಳಿಸಬೇಕು. ಅನೇಕ ಕಾನೂನುಗಳು ಜಾರಿಯಲ್ಲಿದ್ದರೂ ಸಹ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ಸಂಪೂರ್ಣವಾಗಿ ತಡೆಯಲಾಗುತ್ತಿಲ್ಲ. ಬಹುತೇಕರಲ್ಲಿ ಕಾನೂನಿನ ಅರಿವಿನ ಕೊರತೆ ಇರುವುದೇ ಇದಕ್ಕೆ ಕಾರಣವಾಗಿದೆ’ ಎಂದು ಅಭಿಪ್ರಾಯಪಟ್ಟರು. ಸೇಂಟ್ ಮೈಕೆಲ್ ಕಾನ್ವೆಂಟ್ ಪ್ರೌಢಶಾಲೆಯ ಮುಖ್ಯಧ್ಯಾಪಕಿ ಸಿಸ್ಟರ್ ಮರ್ಸಿ ಜಾರ್ಜ್, ವಕೀಲೆ ಸಂಧ್ಯಾ ತಳೇಕರ್ ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Karwar News Tagged With: ಅಳವಡಿಸಬೇಕು, ಕಾನೂನು, ಕಾನೂನು ಬಾಹಿರ ಚಟುವಟಿಕೆ, ಕಿರಿಯ ವಯಸ್ಸಿನಿಂದಲೇ, ಜಿಲ್ಲಾ ನ್ಯಾಯಾಧೀಶ, ಪಠ್ಯ ಪುಸ್ತಕದಲ್ಲಿ, ಪಾಠಗಳನ್ನು, ಪ್ರೌಢಶಾಲೆ ವಿಭಾಗದ, ವಿ.ಎಸ್ ಧಾರವಾಡಕರ್, ವಿದ್ಯಾರ್ಥಿ ಜೀವನ, ಸೇಂಟ್ ಮೈಕೆಲ್ ಕಾನ್ವೆಂಟ್

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar