ಕಾರವಾರ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೆದರಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ್ ಜನ್ನು ಹೇಳಿಕೆ ನೀಡಿದ್ದಾರೆ.
ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಅವರು, ಅನಂತಕುಮಾರ ಹೆಗಡೆ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಲೇ ಬಂದವರು. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಒಲೈಕೆಗಾಗಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವದನ್ನು ಸಚಿವ ಅನಂತಕುಮಾರ ಹೆಗಡೆ ಖಂಡಿಸಿದ್ದರು. ಟಿಪ್ಪು ಜಯಂತಿ ಆಮಂತ್ರಣದಲ್ಲಿ ತಮ್ಮ ಹೆಸರು ಬಳಸಿದರೆ ಅದೇ ವೇದಿಕೆಯಲ್ಲಿ ಟಿಪ್ಪುವಿನ ಇತಿಹಾಸ ಬಿಚ್ಚಿಡುವದಾಗಿ ಹೇಳಿದ್ದರು. ಈ ಹೇಳಿಕೆಗೆ ಹೆದರಿದ ಸರ್ಕಾರ ಸಚಿವರ ಹೆಸರು ಮುದ್ರಿಸಿಲ್ಲ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.
Leave a Comment