ಕಾರವಾರ:
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2017 ನೇ ಸಾಲಿನ ಕೊಂಕಣಿ ಸಾಹಿತ್ಯ. ಕೊಂಕಣಿ ಕಲೆ. ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಳಿಗಾಗಿ ಅರ್ಜಿ ಕರೆಯಲಾಗಿದೆ.
ಪ್ರಶಸ್ತಿಯು ರೂ.50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ ಫಲತಾಂಬೂಲವನ್ನು ಒಳಗೊಂಡಿದೆ. ಅಸಕ್ತರು ನೇರವಾಗಿ ಅರ್ಜಿಸಲ್ಲಿಸಬಹುದಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರೂ ಸಹ ಸಾಧಕರ ಹೆಸರು ಸೂಚಿಸಿ ಅರ್ಜಿ ಸಲ್ಲಿಸಬಹುದು.
ಕೊಂಕಣಿ ಸಾಹಿತ್ಯ ಅಕಾಡೆಮಿ 2017 ರ ಪುಸ್ತಕ ಬಹುಮಾನ:
2017 ರ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿತವಾದ ಕೊಂಕಣಿ ಕವನ ಅಥವಾ ಲೇಖನ ಅಥವಾ ವಿಮರ್ಶೆ, ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ ಅಥವಾ ಅಧ್ಯಯನ ಕೃತಿ, ಕೊಂಕಣಿಗೆ ಭಾಷಾಂತರಿಸಿದ ಕೃತಿ ಬಗ್ಗೆ ಲೇಖಕರಿಂದ, ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ ಜೊತೆಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ. ಪುಸ್ತಕ ಬಹುಮಾನವು ರೂ.25,000/-ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ, ಫಲತಾಂಬೂಲವನ್ನು ಒಳಗೊಂಡಿದೆ.
ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ 20 ಕೊನೆಯ ದಿನವಾಗಿರುತ್ತದೆ. ಭರ್ತಿ ಮಾಡಿದ ಅರ್ಜಿ ಹಾಗೂ ಪುಸ್ತಕಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕೆ ಕಟ್ಟಡ, ಲಾಲ್ಭಾಗ್ ಮಂಗಳೂರು-3 ಇವರಿಗೆ ಕಳುಹಿಸಿಕೊಡಲು ವಿನಂತಿಸಲಾಗಿದೆ.
Leave a Comment