ಕಾರವಾರ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ ಬಂದಿರುವದನ್ನು ಕಾರವಾರ-ಅಂಕೋಲಾ ಜೆಡಿಎಸ್ ಪಕ್ಷ ಖಂಡಿಸಿದೆ.
ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ, ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳಿಗೆ ಬೆದರಿಕೆಗಳು ಹೆಚ್ಚಿದೆ. ಸಾರ್ವಜನಿಕ ಜೀವನದಲ್ಲಿರುವವರಿಗೆ ಸೂಕ್ತ ರಕ್ಷಣೆಯ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರೀತಿ ಬೆದರಿಕೆ ಹಾಕುವಂತಹ ಘಟನೆಗಳಿಂದ ಕೇಂದ್ರ ಮತ್ತು ರಾಜ್ಯದಲ್ಲಿ ಪ್ರಜಾ ಪ್ರಭುತ್ವದ ವ್ಯವಸ್ಥೆ ಕುರಿತು ಜನ ನಂಬಿಕೆ ಕಳೆದುಕೊಳ್ಳುವಂತಾಗಿದೆ ಎಂದು ಅವರು ಹೇಳಿದ್ದಾರೆ. ಬಸವರಾಜ ಹೊರಟ್ಟಿಯವರಿಗೆ ಸರ್ಕಾರ ಸೂಕ್ತ ಭದ್ರತೆ ಕಲ್ಪಿಸಬೇಕು ಮತ್ತು ರಾಜ್ಯ ಸರ್ಕಾರ ಕೂಡಲೇ ಜೀವ ಬೆದರಿಕೆ ಪತ್ರ ಬರೆದ ದುಷ್ಕರ್ಮಿಗಳನ್ನ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
Leave a Comment