ಕಾರವಾರ: ಪ್ರಸ್ತುತ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ), 3(ಬಿ) ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಮಾಸಿಕ ರೂ.5000/- ರಂತೆ ವ್ಯಾಸಂಗ ವೇತನ ಹಾಗೂ ಶುಲ್ಕ ವಿನಾಯಿತಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಿಂದ ಈ ಹಿಂದೆ ಮಾಸಿಕ ವೇತನ ಫೆಲೋಶಿಪ್ಗೆ ಆಯ್ಕೆಯಾಗಿ ಮುಂದುವರೆಯುತ್ತಿರುವ ಅರ್ಹ ಹಾಗೂ ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು ಅಂದು ಸಂಜೆ 5.30 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್ಸೈಟ್ http://www.backwardclasses.kar.nic.in/ ನ್ನು ಹಾಗೂ 08382-226588 ಸಹ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
Leave a Comment