• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ;ಸಭೆಯಲ್ಲಿ ಆಕ್ರೋಶ

November 12, 2017 by Sachin Hegde Leave a Comment

ಕಾರವಾರ: ತಾಲೂಕು ಪಂಚಾಯಿತಿ ನಾಮನಿರ್ದೇಶಿತ ಸದಸ್ಯರು ನಾಮಕಾವಸ್ಥೆಗೆ ಮಾತ್ರ ಸೀಮಿತ ಎಂಬಂತಾಗಿದೆ. ಕೆಡಿಪಿ ಸಭೆಯಲ್ಲಿಯೂ ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ. ಈ ಕುರಿತು ಸಭೆಯಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ.
ನಾಮ ನಿರ್ದೇಶಿತ ಸದಸ್ಯರಿಗೆ ಅಧಿಕಾರಿಗಳು ಗೌರವ ಕೊಡುವದಿಲ್ಲ. ಸದಸ್ಯರ ಹೆಸರು ಸೂಚಿಸುವ ನಾಮ ಫಲಕವನ್ನು ಹಾಕಿಲ್ಲ. ನಾಮನಿರ್ದೇಶಿತ ಸದಸ್ಯರು ನೀಡುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ನಾಮ ನಿರ್ದೇಶಿತರು ಗಮನಕ್ಕೆ ತಂದ ಒಂದೇ ಒಂದು ಸಮಸ್ಯೆಯನ್ನು ಈ ವರೆಗೆ ಬಗೆಹರಿಸಿಲ್ಲ. ಠರಾವಿನಲ್ಲಿಯೂ ನಮಗೆ ಸ್ಥಾನವಿಲ್ಲ ಎಂದು ತಾಲೂಕು ಪಂಚಾಯಿತಿ ನಾಮನಿರ್ದೇಶಿತ ಸದಸ್ಯ ಚಂದ್ರಕಾಂತ ಚಿಂಚಣಕರ್ ಕೆಡಿಪಿ ಸಭೆಯಲ್ಲಿ ಶಾಸಕ ಸತೀಶ್ ಸೈಲ್ ಮುಂದೆಯೇ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಭವಿಷ್ಯದಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಸೂಕ್ತ ಗೌರವ ಕೊಡುವ ಭರವಸೆ ನೀಡಿದರು.
ಇನ್ನು ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಊಟವನ್ನು ನೀಡಲು ಅಂಗನವಾಡಿ ಕೇಂದ್ರದ ಹತ್ತಿರವಿರುವ ಶಾಲಾ ಕಟ್ಟಡಗಳ ಖಾಲಿ ಕೊಠಡಿಗಳನ್ನು ಬಳಕೆ ಮಾಡಬೇಕು ಎಂದು ಶಾಸಕ ಸತೀಶ್ ಸೈಲ್ ಅಧಿಕಾರಿಗಳಿಗೆ ಸೂಚಿಸಿದರು. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಊಟದ ಜೊತೆ ಮೊಟ್ಟೆ, ಕಾಳು ಸೇರಿದಂತೆ ಇನ್ನಿತರ ಆಹಾರವನ್ನು ನೀಡಲಾಗುತ್ತದೆ. ಆದರೆ ಕೆಲ ಅಂಗನವಾಡಿಗಳು ಚಿಕ್ಕದಾಗಿದ್ದು, ಫಲಾನುಭವಿಗಳು ಮಕ್ಕಳ ಎದುರು ಊಟ ಮಾಡಬೇಕಾದ ಅನಿವಾರ್ಯತೆ ಇದೆ. ಇಂತಹ ಸಂದರ್ಭದಲ್ಲಿ ಯಾವ ತಾಯಿಗೂ ಮಕ್ಕಳನ್ನು ನೋಡುತ್ತ ಮೊಟ್ಟೆ ಸೇರಿದಂತೆ ಇನ್ನಿತರ ಆಹಾರ ಸೇವಿಸಲು ಸಾಧ್ಯವಿಲ್ಲ. ಆದ್ದರಿಂದ ಆಯಾ ಅಂಗನವಾಡಿಗಳ ವ್ಯಾಪ್ತಿಯ ಶಾಲೆಗಳ ಖಾಲಿ ಕೊಠಡಿಗಳನ್ನು ಫಲಾನುಭವಿಗಳಿಗೆ ಊಟ ನೀಡಲು ಬಳಸು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನಗರದ ಕೆಲ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೈಪ್‍ಗಳು ಒಡೆದು ಹೋಗಿದ್ದು, ಈ ಭಾಗದಲ್ಲಿ ಹರಿಯುವ ಚರಂಡಿ ನೀರು ಕುಡಿಯುವ ನೀರಿಗೆ ಸೇರಿ ಕಲುಷಿತಗೊಳ್ಳುತ್ತಿದೆ. ಅಲ್ಲದೆ ಇದು ಆಯಾ ಭಾಗದ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಕೆಲವರಿಗೆ ವಾಂತಿ ಭೇದಿಗೆ ಕಾರಣವಾಗಿದೆ. ಅಲ್ಲದೆ ನಗರ ಪ್ರದೇಶಗಳಲ್ಲಿ ಕಟ್ಟಡ ಕಾರ್ಮಿಕರು ನೀರು ಸಂಗ್ರಹಣೆ ಮಾಆಡಿರುವುದರಿಂದ ಸೊಳ್ಳೆಗಳು ಉತ್ಪತ್ತಿಗೆ ಕಾರಣವಾಗುತ್ತಿದೆ. ಈ ಬಗ್ಗೆ ನಗರಸಭೆಯವರಿಗೆ ಕಟ್ಟಡ ಕಾಮಗಾರಿ ಆರಂಭದಲ್ಲಿಯೇ ಸಂಬಂಧಪಟ್ಟವರಿಗೆ ಸೂಚನೆ ನೀಡಲು ಸೂಚಿಸಬೇಕು ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಸೂರಜಾ ನಾಯ್ಕ ತಿಳಿಸಿದರು.
ಈ ಬಗ್ಗೆ ನಗರಸಭೆಯ ಆರೋಗ್ಯ ನಿರೀಕ್ಷಕ ಯಾಕೂಬ್ ಪ್ರತಿಕ್ರಿಯಿಸಿ, ಈಗಾಗಲೇ ಎಲ್ಲ ಕಡೆಯಲ್ಲಿಯೂ ಫಾಗಿಂಗ್ ಮಾಡಲಾಗುತ್ತಿದೆ. ನೀರಿನ ಪೈಪುಗಳ ಒಡೆದಿರುವ ಕಡೆಯಲ್ಲಿ ಸರಿಪಡಿಸಲು ಗಮನ ಹರಿಸುತ್ತೇವೆ ಎಂದರು. ಎಲ್ಲ ಕಡೆಯ ಒಳ ಚರಂಡಿ ಹಾಗೂ ಕುಡಿಯುವ ನೀರಿನ ಪೈಪುಗಳನ್ನು ಶೀಘ್ರವೇ ಸರಿಪಡಿಸಬೇಕು ಎಂದು ಶಾಸಕ ಸೈಲ್ ಸೂಚಿಸಿದರು. ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲಾಗುತ್ತಿದ್ದು, ಅವರಿಗೆ ಸೂಕ್ತ ವೇತನ ನೀಡದೆ ಗುತ್ತಿಗೆದಾರರು ವಂಚಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಯಾವ ಇಲಾಖೆಗಳಲ್ಲಿ ಎಷ್ಟೆಷ್ಟು ಹೊರ ಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ಅವರ ಗುತ್ತಿಗೆದಾರರು ಯಾರು? ಅವರು ಎಷ್ಟು ವರ್ಷದಿಂದ ನೌಕರರನ್ನು ಪೂರೈಸುತ್ತಿದ್ದಾರೆ? ಮಾಹಿತಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗುತ್ತಿಗೆದಾರರು ಸರಕಾರದಿಂದ ಬರುವ ಸಂಬಳದಲ್ಲಿ ಅರ್ಧದಷ್ಟು ಕಮಿಷನ್ ಪಡೆದು ನೌಕರರಿಗೆ ಉಳಿದವನ್ನು ಪಾವತಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಅವರನ್ನೇ ಕೆಲಸದಿಂದ ತೆಗೆದು ಹಾಕಲಾಗುತ್ತಿದೆ. ಹೀಗಾಗಿ ಶೀಘ್ರವೇ ಈ ಬಗ್ಗೆ ವರದಿ ನೀಡಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Karwar News Tagged With: ಆರೋಗ್ಯ ನಿರೀಕ್ಷಕ, ಕೆಡಿಪಿ ಸಭೆ, ಚಂದ್ರಕಾಂತ ಚಿಂಚಣಕರ್, ನಾಮಕಾವಸ್ಥೆಗೆ, ನಾಮನಿರ್ದೇಶಿತ, ಬೆಲೆಯೇ ಇಲ್ಲ, ಯಾಕೂಬ್, ಸದಸ್ಯರಿಗೆ, ಸದಸ್ಯರು, ಸಭೆಯಲ್ಲಿ ಆಕ್ರೋಶ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar