ಕಾರವಾರ:
, ಕಾರವಾರ: ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ, ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಅಂಗೀಕೃತಗೊಂಡ ಚಿತ್ರಕಲಾ, ದೃಶ್ಯಕಲಾ ಶಿಕ್ಷಣದ ಕಾಲೇಜುಗಳಲ್ಲಿ ಮತ್ತು ಸರ್ಕಾರದ ಮಾನ್ಯತೆ ಪಡೆದ ಗುರುಕುಲದಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ 12 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸುವರು ಕರ್ನಾಟಕ ರಾಜ್ಯದವರಾಗಿದ್ದು 16ರಿಂದ 25 ವಯೋಮಿತಿಯೋಳಗಿರಬೇಕು. ವಿದ್ಯಾರ್ಥಿಗಳು ತಮ್ಮ ಪೂರ್ಣ ವಿವರಗಳೊಂದಿಗೆ ಪಾಸ್ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಕ್ಯಾಬಿನೆಟ್ ಅಳತೆಯ ಎರಡು ಛಾಯಾಚಿತ್ರಗಳನ್ನು ಸೇರಿದಂತೆ ಇದೆ ಮೊದಲ ಬಾರಿ ಎಂದು ಸಂಸ್ಥೆಯ ಮುಖ್ಯಸ್ಥರ ದೃಡಿಕರಣದೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-02 ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ಸೈಟ್ <http://lalitkalakarnataka.org/> ಹಾಗೂ ಇ-ಮೆಲ್ kla.karnataka@gmail.com <mailto:kla.karnataka@gmail.com> ದೂರವಾಣಿ ಸಂಖ್ಯೆ 080-22480297 ಸಂಪರ್ಕಿಸಬಹುದು ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ರಿಜಿಸ್ಟ್ರಾರ್ ಇಂದ್ರಮ್ಮ ಹೆಚ್.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment