ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಹೊಂದಿ ತಮ್ಮ ಕ್ಷೇತ್ರದಲ್ಲಿ ಸಾಧಿಸುವುದರ ಮೂಲಕ ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಆಡಳಿತಾಧಿಕಾರಿ ಪ್ರಕಾಶ ಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಹೊಂದಿ ತಮ್ಮ ಕ್ಷೇತ್ರದಲ್ಲಿ ಸಾಧಿಸುವುದರ ಮೂಲಕ ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಆಡಳಿತಾಧಿಕಾರಿ ಪ್ರಕಾಶ ಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ ಎನ್.ಎಸ್.ಎಸ್. ಘಟಕ ಹಾಗೂ ಸಾಂಸ್ಕøತಿಕ ವೇದಿಕೆಯ ವತಿಯಿಂದ ನಡೆದ 5ನೇ ಕನ್ನಡ ಹಬ್ಬ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. ನಾಡಹಬ್ಬದಲ್ಲಿ ವಿದ್ಯಾರ್ಥಿಗಳಿಗಾಗಿ, ಕೈಬರಹ, ಹನಿಗವನ ರಚನೆ, ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಪ್ಪಟ ಕರಾವಳಿ ಪ್ರತಿಭೆಗಳಾದ ಸತೀಶ ನಾಯ್ಕ ಹಾಗೂ ರಾಘವೇಂದ್ರ ಕವರಿ ಇವರಿಂದ ಮನಮೋಹಕ ರಸಮಂಜರಿ ಕಾರ್ಯಕ್ರಮ ನಡೆದವು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ದಿನೇಶ ನಾಯ್ಕ ಇತರರು ಇದ್ದರು.
Leave a Comment