ಕಾರವಾರ:
ಯೋಜನಾ ಉದ್ಯೋಗ ವಿನಿಮಯ ಕೇಂದ್ರ ಕಾರವಾರ ವತಿಯಿಂದ ನರ್ಸಿಂಗ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಲಘು ಉದ್ಯೋಗಮೇಳ ಆಯೋಜಿಸಲಾಗಿದೆ.
ಮೇಳವು ನವೆಂಬರ 28 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ನಡೆಯಲಿದ್ದು ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಆಸಕ್ತ ಅರ್ಹ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9481274298 ಸಂಪರ್ಕಿಸಲು ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Leave a Comment